ರಾಜ್ಯದಲ್ಲಿ 32 ಜಿಲ್ಲೆಗಳಾ? ಕನಿಷ್ಠ ಜ್ಞಾನವೂ ಇಲ್ಲದ ಕಟೀಲ್- ಕಾಂಗ್ರೆಸ್ 

ಬಿಜೆಪಿ ಪಾದಯಾತ್ರೆಗೆ ವೇಗ ನೀಡಲು  32ನೇ ಜಿಲ್ಲೆ ಯಾದಗಿರಿಗೆ ಬಂದಿದ್ದೇನೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಕಾಂಗ್ರೆಸ್ ವ್ಯಂಗ್ಯವಾಡಿದೆ.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಬಿಜೆಪಿ ಪಾದಯಾತ್ರೆಗೆ ವೇಗ ನೀಡಲು  32ನೇ ಜಿಲ್ಲೆ ಯಾದಗಿರಿಗೆ ಬಂದಿದ್ದೇನೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಕಾಂಗ್ರೆಸ್ ವ್ಯಂಗ್ಯವಾಡಿದೆ.

ನಳಿನ್ ಕುಮಾರ್ ಕಟೀಲ್ ಅವರೇ, ರಾಜ್ಯದಲ್ಲಿರುವುದು 32 ಜಿಲ್ಲೆಗಳಾ?  ರಾಜ್ಯದಲ್ಲೆಷ್ಟು ಜಿಲ್ಲೆಗಳಿವೆ ಎಂಬ ಕನಿಷ್ಠ ಜ್ಞಾನವೂ ಇಲ್ಲದ ನೀವು ರಾಜ್ಯವನ್ನು ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿದ್ದೀರಿ. ಅಲ್ಲದೇ ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿದ್ದೀರಿ. ಪ್ರಾಥಮಿಕ ಶಾಲೆಯ ಪಠ್ಯ ಪುಸ್ತಕವನ್ನು ಒಮ್ಮೆ ಕೊಂಡು ಓದಿ, ಕನಿಷ್ಠ ಸಾಮಾನ್ಯ ಜ್ಞಾನ ವೃದ್ಧಿಸಿಕೊಳ್ಳಿ ಎಂದು ಕಾಲೆಳೆದಿದೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ನಳಿನ್ ಕುಮಾರ್ ಕಟೀಲ್, ರಾಜ್ಯದೆಲ್ಲೆಡೆ ಬಿಜೆಪಿ ಪಾದಯಾತ್ರೆಗಳನ್ನು ನಡೆಸುತ್ತಿದ್ದು, ಅದಕ್ಕೆ ವೇಗ ಕೊಡಲು ಯಾದಗಿರಿ ಮತ್ತು ರಾಯಚೂರಿಗೆ ಬಂದಿದ್ದೇನೆ. ಈಗಾಗಲೇ 31ನೇ ಜಿಲ್ಲೆ ಮುಗಿಸಿಕೊಂಡು ಇಂದು 32 ನೇ ಜಿಲ್ಲೆ ಯಾದಗಿರಿಗೆ ಬಂದಿದ್ದೇನೆ ಎಂದು ಹೇಳಿಕೆ ಕೊಟ್ಟಿದ್ದರು.

ಸದ್ಯ ರಾಜ್ಯದಲ್ಲಿರುವುದು 30 ಜಿಲ್ಲೆಗಳು ಮಾತ್ರ. ಆದರೆ. ನಳಿನ್ ಕುಮಾರ್ ಕಟೀಲ್ ಜಿಲ್ಲೆಗಳ ಸಂಖ್ಯೆಯನ್ನು 32 ಕ್ಕೆ ಹೆಚ್ಚಿಸುವ ಮೂಲಕ ಕಾಂಗ್ರೆಸ್ ಟೀಕೆಗೆ ಗುರಿಯಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com