ಉಪಚುನಾವಣಾ ಸಮರ: ಒಗ್ಗಟ್ಟಿನ ಮಂತ್ರ ಪಠಿಸಲು ರಾಜ್ಯ ಕಾಂಗ್ರೆಸ್'ಗೆ ಸೋನಿಯಾ ಸೂಚನೆ

ಉಪ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವೆ ಮನಸ್ತಾಪಗಳು ಎದುರಾಗದಂತೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿಯವರು ಸೂಚನೆ ನೀಡಿದ್ದಾರೆ. 
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಉಪ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವೆ ಮನಸ್ತಾಪಗಳು ಎದುರಾಗದಂತೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿಯವರು ಸೂಚನೆ ನೀಡಿದ್ದಾರೆ. 

ಉಪ ಚುನಾವಣೆ ಕುರಿತಂತೆ ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್.ಪಾಟೀಲ್ ಅವರೊಂದಿಗೆ ಸೋನಿಯಾ ಗಾಂಧಿಯವರು ಗುರುವಾರ ಚರ್ಚೆ ನಡೆಸಿದ್ದಾರೆ. 

ನಿನ್ನೆಯಷ್ಟೇ ಎಂ.ಸಿ.ವೇಣುಗೋಪಾಲ್ ಅವರೊಂದಿಗೆ ಪಾಟೀಲ್ ಅವರು ಸೋನಿಯಾ ಗಾಂಧಿಯವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ರಾಜ್ಯ ಪ್ರವಾಹ ಪರಿಸ್ಥಿತಿ ಹಾಗೂ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕುರಿತಂತೆ ಚರ್ಚೆ ನಡೆಸಿದ್ದಾರೆ. 

ಒಗ್ಗಟ್ಟಿನ ನಾಯಕತ್ವದೊಂದಿಗೆ ಕಾರ್ಯನಿರ್ವಹಿಸುವಂತೆ ಪಕ್ಷದ ಮುಖ್ಯಸ್ಥರು ಸೂಚನೆ ನೀಡಿದ್ದಾರೆ. ಒಕ್ಕಲಿಗ, ಲಿಂಗಾಯಕರು ಹಾಗೂ ಬ್ರಾಹ್ಮಣರು ಸೇರಿ ಪ್ರಮುಖ ಜಾತಿ, ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆಯೂ ಸೂಚಿಸಿದ್ದಾರೆಂದು ಪಾಟೀಲ್ ಅವರು ತಿಳಿಸಿದ್ದಾರೆ. ಇದೇ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಮತ್ತೆ ತಮಗೆ ಅವಕಾಶ ನೀಡಿದ್ದಕ್ಕೆ ಸೋನಿಯಾ ಗಾಂಧಿಯವರಿಗೆ ಧನ್ಯವಾದ ಸಲ್ಲಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com