ಕಾಂಗ್ರೆಸ್ ಬಿಟ್ಟು ಬಿಜೆಪಿಯತ್ತ ಅನಿಲ್ ಲಾಡ್: ಬಳ್ಳಾರಿ ಬಿಟ್ಟು ಖಾನಾಪುರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ

ಕಾಂಗ್ರೆಸ್ ಮಾಜಿ ಶಾಸಕ ಅನಿಲ್ ಲಾಡ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂಬ ಮಾಹಿತಿ ಇದೆ.

Published: 19th October 2019 07:53 AM  |   Last Updated: 19th October 2019 12:21 PM   |  A+A-


Anil lad

ಅನಿಲ್ ಲಾಡ್

Posted By : Manjula VN
Source : The New Indian Express

ಬೆಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಅನಿಲ್ ಲಾಡ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂಬ ಮಾಹಿತಿ ಇದೆ.

ಬಲ್ಲ ಮೂಲಗಳ ಪ್ರಕಾರ ಅನಿಲ್ ಲಾಡ್ ಬಿಜೆಪಿ ಸೇರ್ಪಡೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಲಾಡ್ ಅವರು ನಾಳೆಯೇ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆನ್ನಲಾಗಿದೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ವಿರುದ್ಧ ಮೊದಲಿಂದಲೂ ಹೋರಾಟ ಮಾಡಿ ಕೊಂಡು ಬಂದಿದ್ದ ಅನಿಲ್ ಲಾಡ್ ತಮ್ಮ ಹಳೆಯ ಧ್ವೇಷ ಮರೆತು ಬಿಜೆಪಿ ಪಾಳ ಯ ಸೇರುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.ಆದರೆ ಮುಂದಿನ ರಾಜಕೀಯ ನಡೆಯನ್ನು ಬಳ್ಳಾರಿ ಬಿಟ್ಟು ದೂರದ ಬೆಳಗಾವಿಗೆ ತಮ್ಮ ಕಾರ್ಯಕ್ಷೇತ್ರ ಬದಲಾ ಯಿಸಿಕೊಳ್ಳುವ ಸಾಧ್ಯತೆ ಇದೆ.ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದ ಮೇಲೆ ಅನಿಲ್ ಲಾಡ್ ತಮ್ಮ ಚಿತ್ತ ನೆಟ್ಟಿದ್ದಾರೆ.

ಅಂತೆಯೇ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಖಾನಾಪುರ ಕ್ಷೇತ್ರದಲ್ಲಿ ಅನಿಲ್ ಲಾಡ್ ಅವರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ ಎನ್ನಲಾಗಿದೆ. ಖಾನಾಪುರವು ಅನಿಲ್ ಲಾಡ್​ಗೆ ಅಪರಿಚಿತವೇನಲ್ಲ. ಅವರ ಮಾವನ ಸಂಬಂಧಿ ಕರು ಇಲ್ಲಿಯೇ ನೆಲೆಸಿದ್ದಾರೆ.

Stay up to date on all the latest ರಾಜಕೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp