'ಸಾವರ್ಕರ್ ಗೆ ಆ ಮೇಲೆ, ಮೊದಲು ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿ': ಸಿದ್ದರಾಮಯ್ಯ 

ಸಾವರ್ಕರ್ ಅವರನ್ನು ಗಾಂಧಿ ಹತ್ಯೆ ಅಪರಾಧಿ ನಾಥೂರಾಮ್  ಘೋಡ್ಸೆಗೆ ಹೋಲಿಸಿ ಹೇಳಿಕೆ ನೀಡಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,  ತ್ರಿವಿಧ ದಾಸೋಹಿ , ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತ ರತ್ನ ಪ್ರಶಸ್ತಿ ನೀಡುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹಿಂದುತ್ವ ಪ್ರತಿಪಾದಕ, ವೀರ ಸೇನಾನಿ ಸಾವರ್ಕರ್ ಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಮಹಾರಾಷ್ಟ್ರ  ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಗ್ಗೆ ರಾಷ್ಟ್ರದಾದ್ಯಂತ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿವೆ.

ರಾಜ್ಯದಲ್ಲೂ ವೀರ ಸಾವರ್ಕರ್ ಗೆ ಪ್ರಶಸ್ತಿ ನೀಡುವ ಬಗ್ಗೆ ಪರ ಹಾಗೂ ವಿರೋಧವಾದ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ ಹಾಗೂ ಬಲಪಂಥೀಯರು ಭಾರತ ರತ್ನ ಪ್ರಶಸ್ತಿಗೆ ಸಾವರ್ಕರ್ ಆರ್ಹರು ಎಂಬಂತೆ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರೆ, ಕಾಂಗ್ರೆಸ್ ಸೇರಿದಂತೆ ಎಡ ಪಂಥೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ಸಾವರ್ಕರ್ ಅವರನ್ನು ಗಾಂಧಿ ಹತ್ಯೆ ಅಪರಾಧಿ ನಾಥೂರಾಮ್  ಘೋಡ್ಸೆಗೆ ಹೋಲಿಸಿ ಹೇಳಿಕೆ ನೀಡಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,  ತ್ರಿವಿಧ ದಾಸೋಹಿ , ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತ ರತ್ನ ಪ್ರಶಸ್ತಿ ನೀಡುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಾವರ್ಕರ್ ಅವರಿಗೆ ಭಾರತ ರತ್ನ ಆ ಮೇಲೆ ಕೊಡುವಿರಂತೆ, ಮೊದಲು ಸಾಮಾಜಿಕ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತ ರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ ಎಂದು ಟ್ವೀಟ್ ಮೂಲಕ ಬಿಜೆಪಿ ಕಾಲೆಳೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com