ಸಾವರ್ಕರ್ ವಿಚಾರದಲ್ಲಿ ಬಿಜೆಪಿ ಮತ ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ: ಎಂ.ಪಿ.ರೇಣುಕಾಚಾರ್ಯ

ದುಷ್ಟರಿಗೆ ಪ್ರಶಸ್ತಿ ಕೊಟ್ಟರೆ ಟೀಕೆ ಮಾಡಿ. ಅಪ್ರತಿಮ ದೇಶ ಭಕ್ತನ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ ಎಂದು ಮುಖ್ಯ ಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಕಿಡಿ ಕಾರಿದ್ದಾರೆ.

Published: 19th October 2019 08:22 AM  |   Last Updated: 19th October 2019 08:22 AM   |  A+A-


MP Renukacharya

ಎಂಪಿ ರೇಣುಕಾಚಾರ್ಯ

Posted By : Srinivasamurthy VN
Source : UNI

ದಾವಣಗೆರೆ: ದುಷ್ಟರಿಗೆ ಪ್ರಶಸ್ತಿ ಕೊಟ್ಟರೆ ಟೀಕೆ ಮಾಡಿ. ಅಪ್ರತಿಮ ದೇಶ ಭಕ್ತನ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ ಎಂದು ಮುಖ್ಯ ಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಕಿಡಿ ಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪ್ರತಿಪಕ್ಷ ದ ನಾಯಕ ರು ಅವರ ಬಗ್ಗೆ ನನಗೆ ಗೌರವ ಇದೆ.ಸಿದ್ದರಾಮಯ್ಯ ಕಾಂಗ್ರೆಸ್​ನಲ್ಲಿ ಮೂಲೆ ಗುಂಪಾಗುತ್ತಿ ದ್ದರು.ಈಗ ವಿರೋಧ ಪಕ್ಷದ ನಾಯಕ ಸ್ಥಾನ ಸಿಕ್ಕಿದೆ. ಹೀಗಾಗಿ ಸಾವರ್ಕರ್ ಅವರ ಬಗ್ಗೆ ಮಾತನಾಡುತ್ತಿದ್ದಾರೆ.ಈ ಹೇಳಿಕೆಯನ್ನು ನಾನು ಕಠೋರವಾಗಿ ಖಂಡಿಸುತ್ತೇನೆ ಎಂದರು.

'ಮತಾಂಧ, ದೇಶ ದ್ರೋಹಿ ಟಿಪ್ಪು ಜಯಂತಿ ಮಾಡಿದ್ದೀರಿ. ಮಡಿಕೇರಿಯಲ್ಲಿ ಬೆಂಕಿ ಹಚ್ಚಿದಿರಿ. ಈಗ ನೀತಿ ಪಾಠ ಹೇಳುತ್ತಾ ದೇಶ ಭಕ್ತನಿಗೆ ಭಾರತ ರತ್ನ‌ ನೀಡುತ್ತಿರುವುದನ್ನು ವಿರೋಧಿಸುತ್ತಿದ್ದೀರಿ. ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕರು. ಅವರ ಬಗ್ಗೆ ಗೌರವ ಇದೆ. ಆದರೆ ವೀರ ಸಾವರ್ಕರ್ ಬಗ್ಗೆ ಹೇಳಿಕೆ ನೀಡಿದ ವಿಚಾರ ಖಂಡಿಸುತ್ತೇನೆ. ದುಷ್ಟರಿಗೆ ಪ್ರಶಸ್ತಿ ಕೊಟ್ಟರೆ ಟೀಕೆ ಮಾಡಿ. ಅದನ್ನು ಬಿಟ್ಟು ಅಪ್ರತಿಮ ದೇಶ ಭಕ್ತನ ಬಗ್ಗೆ ಮಾತನಾಡೋದು ಸರಿಯಲ್ಲ ಎಂದರು. 

ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ಮಾತನಾಡಿರುವುದನ್ನು ಖಂಡಿಸುತ್ತೇನೆ. ಅಲ್ಲದೆ ಬಿಜೆಪಿ ಮತ ಬ್ಯಾಂಕ್ ರಾಜಕಾರಣ ಯಾವತ್ತೂ ಮಾಡಲಿಲ್ಲ. ಗಾಂಧೀಜಿ ಕಲ್ಪನೆ ಇಟ್ಟುಕೊಂಡು ಕೆಲಸ ಮಾಡುತ್ತಿದ್ದು, ಗಾಂಧೀಜಿ ನಮಗೆ ಆದರ್ಶ ವ್ಯಕ್ತಿ. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನಲ್ಲಿ ಮೂಲೆ ಗುಂಪು ಮಾಡಿದ್ದಾರೆ ಎನ್ನುವುದು ಗೊತ್ತಿದೆ.  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಕ್ಷಾತೀತ ನಾಯಕ. ಅವರನ್ನು ಮೂಲೆಗುಂಪು ಮಾಡಲು ಸಾಧ್ಯವಿಲ್ಲ. ದೇಶದಲ್ಲಿ ಅಮಿತ್ ಶಾ, ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ಇದ್ದರೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಈಗ ಸಿಎಂ ಮಾಡಿದ್ದಾರೆ ಎಂದು ಹೇಳಿದರು.

Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp