ಮಹಾರಾಷ್ಟ್ರ: ವಿಧಾನಸಭಾ ಚುನಾವಣಾ ಪ್ರಚಾರ ಅಂತ್ಯ, ಲಕ್ಷ್ಮಣ್ ಸವದಿ ಲವಲವಿಕೆ!

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರ ಶನಿವಾರ ಅಂತ್ಯಗೊಂಡಿದೆ. ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ ಎಂಬ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿಕೆಯಿಂದ ಬಿಜೆಪಿಯಲ್ಲಿ ಉತ್ಸಾಹ ಇಮ್ಮಡಿಕೊಂಡಿದೆ
ಲಕ್ಷ್ಮಣ್ ಸವದಿ
ಲಕ್ಷ್ಮಣ್ ಸವದಿ

ಅಥಣಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರ ಶನಿವಾರ ಅಂತ್ಯಗೊಂಡಿದೆ. ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ ಎಂಬ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿಕೆಯಿಂದ ಬಿಜೆಪಿಯಲ್ಲಿ ಉತ್ಸಾಹ ಇಮ್ಮಡಿಕೊಂಡಿದೆ. ಕನ್ನಡಿಗರೇ ಹೆಚ್ಚಾಗಿರುವ ಪೂರ್ವ ಮಹಾರಾಷ್ಟ್ರದಲ್ಲಿ ಸವದಿ ಕಮಲ ಪರ ಧೀರ್ಘ ಅವಧಿಯ ಪ್ರಚಾರ ನಡೆಸಿದ್ದಾರೆ. ಅವರಿಂದ ಪಕ್ಷದ ಪರ ಹೆಚ್ಚಿನ ಮತಗಳು ದೊರೆಯಲಿವೆ ಎಂಬ ವಿಶ್ವಾಸದಲ್ಲಿದೆ ಬಿಜೆಪಿ. 288 ಸ್ಥಾನದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ 164 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅತ್ಯದ್ಬುತ ಕಾರ್ಯಕ್ಷಮತೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಭ್ರಷ್ಟಾಚಾರ ಮುಕ್ತ ಆಡಳಿತ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಅಧಿಕಾರ ಹಿಡಿಯಲು ನೆರವಾಗಲಿದೆ ಎಂದು ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಚುನಾವಣಾ ಪ್ರಚಾರದ ಪ್ರಚಾರದ ದಿನ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಲಕ್ಷ್ಮಣ್ ಸವದಿ, ಕನ್ನಡಿಗರು ಹೆಚ್ಚಾಗಿರುವ ಪೂರ್ವ ಮಹಾರಾಷ್ಟ್ರ ಹಾಗೂ ಪುಣೆ, ಮುಂಬೈಯಲ್ಲಿ ಪ್ರಚಾರ ನಡೆಸಿದ್ದೇನೆ. ಇಲ್ಲಿ ಕರ್ನಾಟಕದಿಂದ ವಲಸೆ ಬಂದಿರುವ ಕನ್ನಡಿಗರೇ ಹೆಚ್ಚಾಗಿ ವಾಸಿಸುತ್ತಿದ್ದು, ಈಗಲೂ ಕನ್ನಡ ಭಾಷೆಯನ್ನೇ ಮಾತನಾಡುತ್ತಾರೆ. ಪ್ರಚಾರದ ಸಂದರ್ಭದಲ್ಲಿ ಅವರೆಲ್ಲರೂ ಬಿಜೆಪಿಯನ್ನು ಬಲವಾಗಿ ಬೆಂಬಲಿಸುತ್ತಿದದ್ದು ಕಂಡುಬಂದಿತ್ತು ಎಂದರು.

ಮಹಾರಾಷ್ಟ್ರಕ್ಕೆ ನೀರು ಬಿಡುಗಡೆ ಮಾಡುವುದಾಗಿ ಯಡಿಯೂರಪ್ಪ ಹೇಳಿಲ್ಲ, ಅಧಿಕಾರಿಗಳು ಹಾಗೂ ನಾಯಕರೊಂದಿಗೆ ಮಾತುಕತೆ ನಡೆಸಿದ ನಂತರ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.  ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನೀರಿನ ಸಮಸ್ಯೆ ಬಗೆಹರಿಸಬಹುದಿತ್ತು. ಆದರೆ, ಹಾಗೆ ಅವರು ಮಾಡಲಿಲ್ಲ. ಕೆಲವೊಂದು ಕಾರಣದಿಂದ ಮಹದಾಯಿ ನದಿ ಯೋಜನೆ ವಿಳಂಬವಾಗಿದೆ. ಈ ಯೋಜನೆ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ. ಈ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸುತ್ತಿರುವ ರೈತರು ,ತಮ್ಮ ಪ್ರತಿಭಟನೆಯನ್ನು ಹಿಂಪಡೆಯಬೇಕೆಂದು ಲಕ್ಷ್ಮಣ್ ಸವದಿ ಮನವಿ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com