ಮತ್ತೆ ಸಚಿವ ಸಿ.ಟಿ.ರವಿ ಕಾಲೆಳೆದ ಮಾಜಿ ಸಿಎಂ ಸಿದ್ದರಾಮಯ್ಯ: ಮುಂದುವರೆದ ಟ್ವೀಟ್ ವಾರ್

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ಸಿ.ಟಿ.ರವಿ ನಡುವಿನ ಟ್ವೀಟ್ ವಾರ್ ಮುಂದುವರೆದಿದೆ.

Published: 20th October 2019 11:51 AM  |   Last Updated: 20th October 2019 12:00 PM   |  A+A-


Siddaramaiah

ಸಿದ್ದರಾಮಯ್ಯ

Posted By : Manjula VN
Source : UNI

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ಸಿ.ಟಿ.ರವಿ ನಡುವಿನ ಟ್ವೀಟ್ ವಾರ್ ಮುಂದುವರೆದಿದೆ.

ಕುಡಿದ ಮತ್ತಿನಲ್ಲಿ ಅಪಘಾತ ಮಾಡುವವರ ಬಗ್ಗೆ ತಾವು ಮಾತನಾಡಿದರೆ ಸಚಿವರು ಏಕೆ ತಮ್ಮ ಹೆಗಲು ಮುಟ್ಟಿನೋಡಿಕೊಳ್ಳುತ್ತಿದ್ದಾರೋ ಗೊತ್ತಿಲ್ಲ ಎನ್ನುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.

ಸಿದ್ದರಾಮಯ್ಯ ಒಳ್ಳೆಯ ವಕೀಲರಾಗಲು ಲಾಯಕ್ಕಿಲ್ಲ ಎಂಬ ಸಿ.ಟಿ.ರವಿ ಟ್ವೀಟ್ ಗೆ ಟ್ವಿಟ್ಟರ್ ಮೂಲಕವೇ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ತಾವು ಒಳ್ಳೆಯ ವಕೀಲರಾಗಿರುವ ಕಾರಣಕ್ಕಾಗಿಯೇ ಆರೋಪಿಯನ್ನು ಹೆಸರಿಸಿಲ್ಲ. ಪ್ರತಿಕ್ರಿಯಿಸುವ ಮೊದಲು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಅರಿವಿರಬೇಕು ಎಂದು ತಿರುಗೇಟು ನೀಡಿದ್ದಾರೆ.

Stay up to date on all the latest ರಾಜಕೀಯ news
Poll
HD Kumaraswamy

ಹಿಂದಿ ಗೊತ್ತಿರುವುದರಿಂದ ರಾಷ್ಟ್ರ ರಾಜಕಾರಣದಲ್ಲಿ ಉತ್ತರ ಭಾರತದ ನಾಯಕರಿಗೆ ದಕ್ಷಿಣದವರಿಗಿಂತ ಹೆಚ್ಚಿನ ಪ್ರಯೋಜನ ಆಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp