ಹುಣಸೂರು ಜಿಲ್ಲೆಗೆ ವಿಶ್ವನಾಥ್ ಬೇಡಿಕೆ: ಸಿದ್ದರಾಮಯ್ಯ ವ್ಯಂಗ್ಯ 

ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ್ ಅವರ ಪ್ರತ್ಯೇಕ ಹುಣಸೂರು ಜಿಲ್ಲೆ ಬೇಡಿಕೆ ಬಗ್ಗೆ  ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಹುಣಸೂರು: ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ್ ಅವರ ಪ್ರತ್ಯೇಕ ಹುಣಸೂರು ಜಿಲ್ಲೆ ಬೇಡಿಕೆ ಬಗ್ಗೆ  ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರತ್ಯೇಕ ಜಿಲ್ಲೆ ಬೇಡಿಕೆ ಹಿಂದೆ ರಾಜಕೀಯ ಪ್ರೇರಿತವಲ್ಲದೆ ಮತ್ತೇನೂ ಇಲ್ಲ ಎಂದರು. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಕಾಲದಿಂದಲೂ ರಾಜಕೀಯದಲ್ಲಿರುವ ವಿಶ್ವನಾಥ್ ಏಕೆ ಪ್ರತ್ಯೇಕ ಜಿಲ್ಲೆ ಬೇಡಿಕೆಯನ್ನು ಇಟ್ಟಿರಲಿಲ್ಲ ಎಂದು ಪ್ರಶ್ನಿಸಿದರು.

ವಿಶ್ವನಾಥ್ ಕಾಂಗ್ರೆಸ್ ನಲ್ಲಿದ್ದಾಗ ನಾನು ಯಾವುದೇ ರೀತಿಯ ಕಿರುಕುಳ ಕೊಟ್ಟಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಭ್ರಷ್ಟಾಚಾರಿ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿಶ್ವನಾಥ್ ಪತ್ರ ಬರೆದಿದ್ದರು. ಈ ಸಂಬಂಧ ಪ್ರಶ್ನಿಸಿದ್ದಕ್ಕೆ ನಮ್ಮ ನಡುವಿನ ಸಂಬಂಧ ಹಳಸಿತು ಎಂದು ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವಲ್ಲಿ ಹೆಚ್ . ವಿಶ್ವನಾಥ್ ಪ್ರಮುಖ ಪಾತ್ರ ವಹಿಸಿದ್ದರು ಎಂಬಂತಹ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಜನ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು. ಆ ಸಂದರ್ಭದಲ್ಲಿ ಹೆಚ್. ವಿಶ್ವನಾಥ್ ಶಾಸಕರಾಗಿರಲಿಲ್ಲ. ಹುಣಸೂರು ಕ್ಷೇತ್ರದ ಅಂದಿನ ಶಾಸಕ ಹೆಚ್. ಪಿ. ಮಂಜುನಾಥ್ ನನ್ನನ್ನು ಬೆಂಬಲಿಸಿದರು ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com