ಕುಮಾರಸ್ವಾಮಿ (ಸಂಗ್ರಹ ಚಿತ್ರ)
ಕುಮಾರಸ್ವಾಮಿ (ಸಂಗ್ರಹ ಚಿತ್ರ)

ಜೆಡಿಎಸ್'ನಲ್ಲಿ ಭಿನ್ನಮತ ಸ್ಫೋಟ: ಕಾಂಗ್ರೆಸ್, ಬಿಜೆಪಿಯತ್ತ ಮುಖ ಮಾಡಿದ ಶಾಸಕರು

ಉಪ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಜೆಡಿಎಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದ ಕುಟುಂಬ ರಾಜಕೀಯಕ್ಕೆ ಬೇಸತ್ತಿರುವ ಜೆಡಿಎಸ್ ಶಾಸಕರು ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲು ನಿರ್ಧರಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಬೆಂಗಳೂರು: ಉಪ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಜೆಡಿಎಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದ ಕುಟುಂಬ ರಾಜಕೀಯಕ್ಕೆ ಬೇಸತ್ತಿರುವ ಜೆಡಿಎಸ್ ಶಾಸಕರು ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲು ನಿರ್ಧರಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

6 ರಿಂದ 9 ಶಾಸಕರು ಹಾಗೂ ಎಂಎಲ್'ಸಿಗಳು ರಾಷ್ಟ್ರೀಯ ಪಕ್ಷಗಳಿಗೆ ಸೇರ್ಪಡೆಗೊಳ್ಳಲು ನಿರ್ಧರಿಸಿದ್ದಾರೆಂದು ವರದಿಗಳು ತಿಳಿಸಿವೆ. 

ಜೆಡಿಎಸ್ ಎಂಎಲ್ಎ ಹಾಗೂ ಎಂಎಲ್'ಸಿಗಳು ಪಕ್ಷವನ್ನು ತೊರೆಯುವುದರಿಂದ ಉಪ ಚುನಾವಣೆ ಮೇಲೆ ಸಾಕಷ್ಟು ಪ್ರಭಾವ ಬೀರುತ್ತದೆ. ಪಕ್ಷದ ಗೆಲುವೂ ಕೂಡ ಅತ್ಯಂತ ಕಡಿಮೆಯಿದೆ. ಜೆಡಿಎಸ್ ಶಾಸಕರು ಪಕ್ಷ ತೊರೆದು ರಾಷ್ಟ್ರೀಯ ಪಕ್ಷಗಳಿಗೆ ಸೇರ್ಪಡೆಗೊಳ್ಳುವುದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ಸಾಕಷ್ಟು ಸ್ಪರ್ಧೆ ಏರ್ಪಡಲಿದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ. 

ಜೆಡಿಎಸ್ ಹಿರಿಯ ಶಾಸಕರೊಬ್ಬರು ಮಾತನಾಡಿ, ಪಕ್ಷದ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರ ಕುರಿತು ನಮಗೆ ಯಾವುದೇ ಸಮಸ್ಯೆಗಳಿಲ್ಲ. ನಮ್ಮ ಸಮಸ್ಯೆಗಳನ್ನು ಆಲಿಸಲು ಪ್ರತೀ ಬಾರಿ ಸಮಯವನ್ನು ನೀಡುತ್ತಾರೆ. ಆದರೆ, ಪಕ್ಷ ಅವರ ನಿಯಂತ್ರಣದಲ್ಲಿಲ್ಲ. ಅವರ ಮಗನಿಗೇ ಎಲ್ಲಾ ರೀತಿಯ ಅಧಿಕಾರವಿದೆ. ಅವರು ತಂದೆಯ ಮಾತನ್ನು ಕೇಳುತ್ತಿಲ್ಲ. ಹಲವು ವರ್ಷಗಳಿಂದಲೂ ಪಕ್ಷದಲ್ಲಿ ಬಂಡಾಯದ ಹೊಗೆಯಾಡುತ್ತಲೇ ಇದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಜಮೀರ್ ಅಹ್ಮದ್, ಅಖಂಡ ಶ್ರೀನಿವಾಸ್ ಮತ್ತು ಚೆಲುವನಾರಾಯಣ ಸ್ವಾಮಿಯವರು ಕಾಂಗ್ರೆಸ್ ನತ್ತ ಮುಖ ಮಾಡಿದ್ದರು. ಜೆಡಿಎಸ್ ಶಾಸಕರು ಬಂಡಾಯ ಪಕ್ಷ ಪರವಾಗಿ ಮುಖ ಮಾಡಿದಾಗ ಪಕ್ಷ ಸಾಕಷ್ಟು ಹಿನ್ನಡೆ ಅನುಭವಿಸುವಂತಾಗಿತ್ತು. ಬಳಿಕ ಕುಮಾರಸ್ವಾಮಿ ನೇತೃತ್ವದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಪಕ್ಷ ನೆಲೆ ಕಂಡಿಕೊಂಡಿತು ಎಂದು ಹೇಳಿದ್ದಾರೆ. 

ಲೋಕಸಭಾ ಚುನಾವಣೆ ವೇಳೆಯೂ ಸಾಕಷ್ಟು ನಾಯಕರು ರಾಷ್ಟ್ರೀಯ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡ ಅವರೂ ಕೂಡ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರನ್ನು ಕೊಂಡಾಡಿದ್ದರು. ದೇವೇಗೌಡ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆಂಬ ಮಾತುಗಳೂ ಕೇಳಿ ಬಂದಿದ್ದವು. 

ಪಕ್ಷ ತಮ್ಮನ್ನು ಬಳಸಿಕೊಳ್ಳುತ್ತಿದೆ ಎಂಬ ಭಾವನೆಗಳು ಕೂಡ ಸಾಕಷ್ಟು ನಾಯಕರಲ್ಲಿ ಮೂಡಿದೆ. ಜೆಡಿಎಸ್ ಅಧಿಕಾರದಲ್ಲಿದ್ದಾಗ ನಮಗೆ ಸಚಿವ ಸ್ಥಾನ ನೀಡಲಿಲ್ಲ. ನಿಗಮ ಮಂಡಳಿಯಲ್ಲೂ ನಮಗೆ ಸ್ಥಾನ ನೀಡಲಿಲ್ಲ. ಕೇವಲ ಕುಟುಂಬ ಸದಸ್ಯರಿಗಷ್ಟೇ ಅಧಿಕಾರ ನೀಡಿತ್ತು. ಪಕ್ಷ ಅಧಿಕಾರದಲ್ಲಿಲ್ಲದ ಸಂದರ್ಭದಲ್ಲಿ ನಮ್ಮನ್ನು ಕರೆದು, ಪಕ್ಷ ಕಟ್ಟುವಲ್ಲಿ ಕೈಜೋಡಿಸುವಂತೆ ತಿಳಿಸುತ್ತಿದ್ದರು. ಪಕ್ಷದ ಬೆಳವಣಿಗೆಗಳು ಸಾಕಷ್ಟು ನೋವು ತಂದಿದೆ. ಪಕ್ಷವನ್ನು ನಾನು ತೊರೆಯುವುದಿಲ್ಲ ಆದರೆ, 2022ರ ವೇಳೆ ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆಂದು ಜೆಡಿಎಸ್ ಹಿರಿಯ ನಾಯಕ ಹಾಗೂ ಎಂಎಲ್'ಸಿ ಬಸವರಾಜ ಹೊರಟ್ಟಿಯವರು ಹೇಳಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com