ಉಪಚುನಾವಣೆಗಾಗಿ ಬಿಜೆಪಿ ನಾಯಕರ ರಣತಂತ್ರ

ಡಿಸೆಂಬರ್ 5 ರಂದು ರಾಜ್ಯದಲ್ಲಿ ನಡೆಯುವ ಉಪ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಿದೆ, ಅನರ್ಹ ಶಾಸಕರು ಮತ್ತು ಸ್ಥಳೀಯ ಮುಖಂಡರ ನಡುವೆ ಹೊಂದಾಣಿಕೆ ಸೃಷ್ಟಿಸುವುದು ಬಿಜೆಪಿಗೆ ಪ್ರಮುಖ ಸವಾಲಾಗಿದೆ.
ಬಿಜೆಪಿ ಸಭೆ
ಬಿಜೆಪಿ ಸಭೆ

ಬೆಂಗಳೂರು:  ಡಿಸೆಂಬರ್ 5 ರಂದು ರಾಜ್ಯದಲ್ಲಿ ನಡೆಯುವ ಉಪ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಿದೆ, ಅನರ್ಹ ಶಾಸಕರು ಮತ್ತು ಸ್ಥಳೀಯ ಮುಖಂಡರ ನಡುವೆ ಹೊಂದಾಣಿಕೆ ಸೃಷ್ಟಿಸುವುದು ಬಿಜೆಪಿಗೆ ಪ್ರಮುಖ ಸವಾಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು ಬುಧವಾರ ಬೆಂಗಳೂರಿನಲ್ಲಿ ಸಭೆ ನಡೆಸಿ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಿದ್ದಾರೆ.

ಪಕ್ಷದ ಕೋರ್ ಕಮಿಟಿ ಸಭೆಯ ನಂತರ, ಹಳೆಯ ಮೈಸೂರು ಪ್ರದೇಶದ ಎಂಟು ಕ್ಷೇತ್ರಗಳಲ್ಲಿ ಉಪಚುನಾವಣೆಗಳ ತಯಾರಿ ಕುರಿತು ಚರ್ಚಿಸಲಾಗಿದೆ ಎಂದು ಸಿಎಂ ಹೇಳಿದರು. ಜೊತೆಗೆ ಎಲ್ಲಾ ನಾಯಕರು ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಅಕ್ಟೋಬರ್ 26 ರಂದು ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ, ಉತ್ತರ ಕರ್ನಾಟಕ ಭಾಗಗಳ ವಿಧಾನ ಸಭೆ ಉಪ ಚುನಾವಣೆ ಸಿದ್ಧತೆಗಳ ಚರ್ಚೆ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ, 

ಕೋರ್ ಕಮಿಟಿ ಸಭೆಗೂ ಮುನ್ನ ಬೆಂಗಳೂರಿನ ಎಲ್ಲಾ ಪ್ರಮುಖ ನಾಯಕರುಗಳ ಜೊತೆ ಚರ್ಚಿಸಿ ಚುನಾವಣೆಗಾಗಿ ಸಿದ್ಧತೆ ನಡೆಸುವಂತೆ ಸೂಚಿಸಲಾಗುವುದು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಲಿ  ಹೇಳಿದ್ದಾರೆ, 

ಸಭೆಯಲ್ಲಿ ಉತ್ತರ ಕರ್ನಾಟಕ ಪ್ರವಾಹ ಪರಿಸ್ಥಿತಿಯ ಬಗ್ಗೆ  ಪಕ್ಷದ ನಾಯಕರುಗಳ ಜೊತೆ ಚರ್ಚಿಸಲಾಯಿತು. ಜೊತೆಗೆ ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆಯೂ ವಿವರಿಸಲಾಯಿತು. ಆದರೆ ಸಭೆಯಲ್ಲಿ ಕೆಎಸ್ ಈಶ್ವರಪ್ಪ, ಸಿಟಿ ರವಿ ಸೇರಿದಂತೆ ಹಲವು ನಾಯಕರು ಬುಧವಾರ ನಡೆದ ಸಭೆಗೆ ಗೈರಾಗಿದ್ದರು ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com