ಡಿಕೆ ಶಿವಕುಮಾರ್ ಹುಲಿಯಲ್ಲ ಇಲಿ : ಡಾ.ಅಶ್ವಥ್ ನಾರಾಯಣ್ ಲೇವಡಿ

ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ತಮ್ಮ ಅಸ್ಥಿತ್ವ ಕಳೆದು ಕೊಂಡಿದ್ದು, ಒಳಜಗಳ,ಸಮಾಜ ಒಡೆಯುವ ಕಾರ್ಯಕ್ಕೆ ಜನರು ಬೇಸತ್ತಿದ್ದಾರೆ. ಹೀಗಾಗಿ ಉಪಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ನಮಗೆ ಇದೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಉಡುಪಿ: ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ತಮ್ಮ ಅಸ್ಥಿತ್ವ ಕಳೆದು ಕೊಂಡಿದ್ದು, ಒಳಜಗಳ,ಸಮಾಜ ಒಡೆಯುವ ಕಾರ್ಯಕ್ಕೆ ಜನರು ಬೇಸತ್ತಿದ್ದಾರೆ. ಹೀಗಾಗಿ ಉಪಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ನಮಗೆ ಇದೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
  
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಲಿಷ್ಠ ವಿಪಕ್ಷವಾಗಿ ಕೆಲಸ ಮಾಡುತ್ತಿಲ್ಲ.ಸುಧಾರಣೆಗೆ ಒಂದೆರಡು ವರ್ಷ ಬೇಕಾಗುತ್ತದೆ .ಅವರು ರಾಜ್ಯದಲ್ಲಿ ಅಸ್ಥಿತ್ವದಲ್ಲಿದ್ದ  ಸರ್ಕಾರವನ್ನೇ ಉಳಿಸಿಕೊಳ್ಳಲಿಲ್ಲ.ಇಲಿ ಬಂದರೆ ಹುಲಿ ಬಂತು ಎನ್ನಲಾಗುತ್ತಿದೆ.ಹೀಗಾಗಿ ಅವರ ಬಿಡುಗಡೆಗೆ ಹೆಚ್ಚಿನ ಮಹತ್ವ ಕೊಡಬೇಕಾಗಿಲ್ಲ ಎಂದುಅವರು ಹೇಳಿದರು.
  
ಎಲ್ಲೂ ಸಲ್ಲದವರು ಈಗ ಉಪಚುನಾವಣೆಯಲ್ಲಿ ಸಲ್ಲುತ್ತಾರಾ? ಸಮಾಜಕ್ಕೆ ಭ್ರಷ್ಟ ರಹಿತ ಆಡಳಿತ ನೀಡಬೇಕು.ಭ್ರಷ್ಟಾಚಾರ ಪೂರಕ ಸಮಾಜ ಕಟ್ಟುವುದು ಅಸಾಧ್ಯದ ಮಾತು.ಜಾತಿಯ ಹಿನ್ನೆಲೆಯಲ್ಲಿ ರಕ್ಷಣೆ ಪಡೆಯುವುದು ಸರಿಯಲ್ಲ ಎಂದು ಅವರು ಡಿಕೆ ಶಿವಕುಮಾರ್​ಗೆ ತಿರುಗೇಟು ನೀಡಿದರು.
  
ರಾಜ್ಯದಲ್ಲಿದ್ದ ಕೆಟ್ಟ ಸಮ್ಮಿಶ್ರ ಸರ್ಕಾರವನ್ನ ಅನರ್ಹ ಶಾಸಕರು ಪತನಗೊಳಿಸಿದರು.ಆ ಶಾಸಕರು ಸಮಾಜದ ರಕ್ಷಣೆಗೆ ಬಂದವರು.ಅವರು ಸತ್ಕಾರ್ಯ ಮಾಡಿದವರು.ಅವರಿಗೆ ಮಾನ್ಯತೆ ಸಿಗದೆ ಮತ್ತೆ ಯಾರಿಗೆ ಸಿಗಬೇಕು? ಅವರು ಈವರೆಗೆ ಬಿಜೆಪಿ ಪಕ್ಷಕ್ಕೆ ಸೇರಿಲ್ಲ.ಸೇರ್ಪಡೆ ನಂತರ ಯಾರಿಗೆ ಟಿಕೆಟ್ ಕೊಡಬೇಕು ಎಂದು ಪಕ್ಷ ನಿರ್ಧ ರಿಸುತ್ತದೆ ಎಂದು ಅವರು ಹೇಳಿದರು.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com