ಕಾಂಗ್ರೆಸ್ ನೈತಿಕ ಸ್ಥೈರ್ಯ ಹೆಚ್ಚಿಸಿದ 'ಮಹಾ' ಫಲಿತಾಂಶ: ಬಿಎಸ್'ವೈ ವಿರುದ್ಧ 'ಬೆಂಗಳೂರು ಚಲೋ'ಗೆ ಸಿದ್ದು ಸಿದ್ಧ

ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರ ರಚಿಸುವ ಮಟ್ಟಿಗೆ ಬಿಜೆಪಿ ಕುಸಿದಿದ್ದು, ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷದ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು...
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರ ರಚಿಸುವ ಮಟ್ಟಿಗೆ ಬಿಜೆಪಿ ಕುಸಿದಿದ್ದು, ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷದ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ 'ಬೆಂಗಳೂರು ಚಲೋ' ಚಳುವಳಿ ನಡೆಸಲು ಸಿದ್ಧತೆ ನಡೆಸಿದ್ದಾರೆಂದು ತಿಳಿದುಬಂದಿದೆ. 

ನೆರೆ ಪೀಡಿತ ಕಾರ್ಯಗಳಲ್ಲಿ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಬೆಳಗಾವಿಯಿಂದ ಯಡಿಯೂರಪ್ಪ ವಿರುದ್ಧ ಬೆಂಗಳೂರು ಚಲೋ ಪಾದಯಾತ್ರೆ ನಡೆಸಲು ಸಿದ್ದರಾಮಯ್ಯ ಸಿದ್ಥತೆ ನಡೆಸಿದ್ದಾರೆಂದು ತಿಳಿದುಬಂದಿದೆ. 

2010ರ ಜುಲೈ ತಿಂಗಳಿನಲ್ಲಿಯೂ ಸಿದ್ದರಾಮಯ್ಯ ಅವರು ಬಳ್ಳಾರಿ ಚಲೋ ಪಾದಯಾತ್ರೆಯನ್ನು ನಡೆಸಿದ್ದರು. ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದರು. ಅಕ್ರಮ ಗಣಿ  ವಿರುದ್ಧ ಬಿಜೆಪಿ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಿತ್ತು. ಕಾಂಗ್ರೆಸ್ ಪಕ್ಷದ ಈ ಹೋರಟಾಟ ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿತ್ತು. 2013ರ ವಿಧಾನಸಭಾ ಚುನಾವಣೆಯಲ್ಲಿ ಇದು ಮುಖ್ಯ ವಿಚಾರ ಕೂಡ ಆಗಿತ್ತು. ಹೀಗಾಗಿಯೇ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. 

ಇದೀಗ ಇಂತಹದ್ದೇ ಮತ್ತೊಂದು ಹೋರಾಟಕ್ಕೆ ಕಾಂಗ್ರೆಸ್ ಮುಂದಾಗಿದ್ದು, ಸರ್ಕಾರ ರಚಿಸಲು ತುದಿಗಾಲಲ್ಲಿ ನಿಂತಿದೆ. ಈ ಬಾರಿ ಪ್ರವಾಹ ಪರಿಸ್ಥಿತಿಯನ್ನೇ ಬಿಜೆಪಿ ವಿರುದ್ಧ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಚಿಂದನೆ ನಡೆಸಿದೆ. 

ಹರಿಯಾಣ ಹಾಗೂ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಉತ್ತಮ ಬೆಳವಣಿಗೆ ಕಂಡಿದ್ದು, ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ. ಮನೆಗಳನ್ನು ಕಳೆದುಕೊಂಡವರಿಗೆ ರೂ.10 ಸಾವಿರ ನೀಡಿದ್ದನ್ನು ಬಿಟ್ಟರೆ, ಸರ್ಕಾರ ಏನನ್ನೂ ಮಾಡಿಲ್ಲ. ಬಂಡಾಯ ಶಾಸಕರನ್ನು ಮತ್ತೆ ಪಕ್ಷಕ್ಕೆ ಕರೆದುಕೊಳ್ಳುವುದಿಲ್ಲ. ಬಿಎಸ್'ವೈ ರಾಜೀನಾಮೆ ನೀಡಲೇಬೇಕಾದ ಪರಿಸ್ಥಿತ ಬರಲಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com