ಉಪಚುನಾವಣೆಗೆ ಕಾಂಗ್ರೆಸ್, ಜೆಡಿಎಸ್ ಭರ್ಜರಿ ಸಿದ್ಧತೆ: 'ಸುಪ್ರೀಂ' ಆದೇಶಕ್ಕಾಗಿ ಕಾಯುತ್ತಿರುವ ಬಿಜೆಪಿ

ಮತ್ತೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ಹವಣಿಸುತ್ತಿದ್ದು, ಉಪ ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. ಆದರೆ, ಬಿಜೆಪಿ ಮಾತ್ರ ಅನರ್ಹ ಶಾಸಕರ ಕುರಿತು ಸುಪ್ರೀಂಕೋರ್ಟ್ ಆದೇಶಕ್ಕಾಗಿ ಕಾದು ಕುಳಿತಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮತ್ತೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ಹವಣಿಸುತ್ತಿದ್ದು, ಉಪ ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. ಆದರೆ, ಬಿಜೆಪಿ ಮಾತ್ರ ಅನರ್ಹ ಶಾಸಕರ ಕುರಿತು ಸುಪ್ರೀಂಕೋರ್ಟ್ ಆದೇಶಕ್ಕಾಗಿ ಕಾದು ಕುಳಿತಿದೆ. 

ನಾವೀಗ ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ಅನರ್ಹರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಬೇಕೋ ಅಥವಾ ಅವರಿಗೆ ಬೇಡವೆನ್ನಬೇಕೋ ಎಂಬುದು ಅರ್ಥವಾಗುತ್ತಿಲ್ಲ. ಸುಪ್ರೀಂಕೋರ್ಟ್ ಆದೇಶದ ಬಳಿಕವಷ್ಟೇ ಸ್ಪಷ್ಟ ನಿರ್ಣಯಕ್ಕೆ ಬರಲು ಸಾಧ್ಯ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿದೆ. 

ಮತ್ತೊಂದೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಉಪ ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. ಕಳೆದ 3 ತಿಂಗಳಿಗಳಿಂದಲೂ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರು ಹೇಳಿದ್ದಾರೆ. 
 
ಪಕ್ಷ್ದ ಕಾರ್ಯಕರ್ತರು ಹಾಗೂ ಪಕ್ಷದೊಂದಿಗೆ ಸಾಕಷ್ಟು ಸಮಾವೇಶ, ಸಭೆಗಳನ್ನು ನಡೆಸಲಾಗಿದೆ. ಗೆಲ್ಲುವ ಅಭ್ಯರ್ಥಿಗಳ ಪಟ್ಟಿ ನಮ್ಮಲ್ಲಿದೆ. ಒಂದು ಅಥವಾ ಎರಡು ದಿನಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಲ್ಲ. ಸಾಕಷ್ಟು ಸಿದ್ಧತೆಗಳ ಬಳಿಕವೇ ಆಯ್ಕೆ ಮಾಡಲಾಗಿದೆ. ಸುಪ್ರೀಂಕೋರ್ಟ್ ಆದೇಶ ಸ್ಪಷ್ಟವಾದರೆ, ಚುನಾವಣೆಗೆ ನಾವು ಸಿದ್ಧರಿದ್ದೇವೆ. ಫಲಿಕಾಂಶ ಅಥವಾ ಗೆಲುವಿನ ಬಗ್ಗೆ ನಮಗೆ ಚಿಂತೆಯಿಲ್ಲ ಎಂದು ತಿಳಿಸಿದ್ದಾರೆ. 
 
ಸಾಧ್ಯವಾದಷ್ಟು ಬೇಗ ನ್ಯಾಯಾಲಯ ತೀರ್ಪು ನೀಡಿದರೆ ಉತ್ತಮವಾಗಿರುತ್ತದೆ. ಜೆಡಿಎಸ್ ನಾಯಕರೂ ಉಪ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. 15 ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಲಾಗುತ್ತದೆ ಎಂದು ಈಗಾಗಲೇ ಕುಮಾರಸ್ವಾಮಿಯವರು ಹೇಲಿದ್ದಾರೆ. 7-8 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳಿದ್ದಾರೆಂದು ಜೆಡಿಎಸ್ ಮೂಲಗಳು ಮಾಹಿತಿ ನೀಡಿವೆ. 
 
ಶಿವಾಜಿನಗರದಿಂದ ತನ್ವೀರ್ ಪಾಷಾ, ಚಿಕ್ಕಬಳ್ಳಾಪುರದಿಂದ ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ, ಯಶವಂತಪುರದಲ್ಲಿ ಹೆಚ್.ಜವರೇಗೌಡ ಸ್ಪರ್ಧಿಸಲಿದ್ದಾರೆ. ಹುಣಸೂರಿ, ಕೆಆರ್.ಪೇಟೆ, ಹಳಿಯಾಳ್ ಸೇರಿದಂತೆ ಹಲವು ಕ್ಷೇತ್ರಗಳಿಗೂ  ಅಭ್ಯರ್ಥಿಗಳಿದ್ದಾರೆ. ನಮ್ಮದು ರಾಜಕೀಯ ಪಕ್ಷವಾಗಿದ್ದು, ಯಾವುದೇ ದಿನ ಚುನಾವಣೆ ಎದುರಿಸಲು ನಾವು ಸಿದ್ಧ ಎಂದು ಜೆಡಿಎಸ್ ಎಂಎಲ್ಸಿ ರಮೇಶ್ ಬಾಬು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com