ಅವರಿಲ್ಲದಿದ್ದರೆ ನೀವು ಡಿಸಿಎಂ ಆಗುತ್ತಿರಲಿಲ್ಲ: ಅನರ್ಹರಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದ ಸವದಿಗೆ ಕತ್ತಿ ತಿರುಗೇಟು

ಸ್ವಪಕ್ಷೀಯರ ವಿರುದ್ಧ ಬಿಜೆಪಿ ಹಿರಿಯ ಮುಖಂಡ ಉಮೇಶ್ ಕತ್ತಿ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಅದರಲ್ಲೂ ಅನರ್ಹರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಉಮೇಶ್ ಕತ್ತಿ
ಉಮೇಶ್ ಕತ್ತಿ

ಬೆಂಗಳೂರು: ಸ್ವಪಕ್ಷೀಯರ ವಿರುದ್ಧ ಬಿಜೆಪಿ ಹಿರಿಯ ಮುಖಂಡ ಉಮೇಶ್ ಕತ್ತಿ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಅದರಲ್ಲೂ ಅನರ್ಹರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶಾಸಕರಲ್ಲದವರನ್ನು ಡಿಸಿಎಂ ಮಾಡಿರುವ ಪಕ್ಷ ಯಾವುದಾದರೂ ಇದ್ದರೆ, ಅದು ಬಿಜೆಪಿ ಮಾತ್ರ. ಅನರ್ಹ ಶಾಸಕರು ರಾಜೀನಾಮೆ ಕೊಡದಿದ್ದರೆ ಲಕ್ಷ್ಮಣ ಸವದಿ ಡಿಸಿಎಂ ಆಗುತ್ತಿರಲಿಲ್ಲ. ಈ ಸಂಗತಿಯನ್ನು ಸವದಿ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. 

ಗೋವಿಂದ ಕಾರಜೋಳ, ಅಶ್ವತ್ಥ್ ನಾರಾಯಣ ಕೂಡ ಉಪ ಮುಖ್ಯಮಂತ್ರಿಯಾಗುವ ಅರ್ಹತೆ ಹೊಂದಿಲ್ಲ. ಈ ಮೂವರಿಗೂ ದೊಡ್ಡ ವ್ಯಕ್ತಿಗಳಲ್ಲ. ಏಕೆಂದರೆ, ಡಿಸಿಎಂ ಸಾಂವಿಧಾನಿಕ ಹುದ್ದೆಯಲ್ಲ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಅನರ್ಹರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಚುನಾವಣೆಯಲ್ಲಿ ಬಿಜೆಪಿ ಶಾಸಕರನ್ನು ಸೋಲಿಸಿದ್ದವರನ್ನು ಸ್ಪರ್ಧೆಗಿಳಿಸುವಂತೆ ಪಕ್ಷದ ಹೈಕಮಾಂಡ್'ಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. 

ಗೋಕಾಕ್'ನಲ್ಲಿ ಅಶೋಕ್ ಪೂಜಾರಿ, ಕಾಗ್ವಾಡ್ ನಲ್ಲಿ ರಾಜು ಕಾಗೆ, ಅಥಣಿಯಲ್ಲಿ ಲಕ್ಷ್ಮಣ್ ಸವದಿಯನ್ನು ಸೋಲಿಸಲಾಗಿತ್ತು. ಈ ಬಗ್ಗೆ ಪಕ್ಷವೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ. 

ಈ ನಡುವೆ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರು ಸವದಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅರ್ಹತೆ ಬಗ್ಗೆ ಈಗಲೂ ಗೊಂದಲವಿದೆ ಎಂದು ಶ್ರೀಮಂತ ಪಾಟೀಲ್ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com