ಬಿಜೆಪಿಗೆ ಪರೋಕ್ಷವಾಗಿ ಜೆಡಿಎಸ್ ಬೆಂಬಲಿಸಿದರೆ ಸ್ವಾಗತ: ಸುರೇಶ್ ಅಂಗಡಿ

ಪರೋಕ್ಷವಾಗಿ ಜೆಡಿಎಸ್ ಪಕ್ಷ ಸರ್ಕಾರಕ್ಕೆ ಬೆಂಬಲ ನೀಡಿದರೆ ಬಿಜೆಪಿ ಸ್ವಾಗತಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಿಜೆಪಿಗೆ ಪರೋಕ್ಷವಾಗಿ ಜೆಡಿಎಸ್ ಬೆಂಬಲಿಸಿದರೆ ಸ್ವಾಗತ: ಸುರೇಶ್ ಅಂಗಡಿ
ಬಿಜೆಪಿಗೆ ಪರೋಕ್ಷವಾಗಿ ಜೆಡಿಎಸ್ ಬೆಂಬಲಿಸಿದರೆ ಸ್ವಾಗತ: ಸುರೇಶ್ ಅಂಗಡಿ

ಬೆಳಗಾವಿ: ಪರೋಕ್ಷವಾಗಿ ಜೆಡಿಎಸ್ ಪಕ್ಷ ಸರ್ಕಾರಕ್ಕೆ ಬೆಂಬಲ ನೀಡಿದರೆ ಬಿಜೆಪಿ ಸ್ವಾಗತಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಬಿಜೆಪಿ ಸರ್ಕಾರವನ್ನು ಹೊಗಳಲು ಕಾರಣ ಈ ಹಿಂದೆ ಬಿಜೆಪಿ - ಜೆಡಿಎಸ್ 20-20 ಸರ್ಕಾರ ಮಾಡಿದ್ದೇವೆ. ಬಿಜೆಪಿ ಜೊತೆ ಸರ್ಕಾರ ಮಾಡಿದರೆ, ಎಷ್ಟು ಒಳ್ಳೆಯ ಅಭಿವೃದ್ಧಿ ಆಗುತ್ತದೆ ಎಂಬುದು ಅವರಿಗೆ ಗೊತ್ತಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ  ಸರ್ಕಾರ ಇರಬೇಕು ಎಂದು  ಕುಮಾರಸ್ವಾಮಿ ಅವರು ಪ್ರಾರ್ಥಿಸುತ್ತಾರೆ ಎಂದರು.
ಕುಮಾರಸ್ವಾಮಿ ಅವರು ಬಿಜೆಪಿಗೆ ಬೆಂಬಲಿಸುವ ವಿಚಾರ ಕುರಿತು ಮಾತನಾಡಿದ ಅವರು, ಬಿಜೆಪಿ ಪಕ್ಷ ಜಗತ್ತಿನ ಪ್ರಜಾಪ್ರಭುತ್ವ ಪಕ್ಷವಾಗಿದೆ. ಬಿಜೆಪಿ ಒಂದು ಕುಟುಂಬ ಅಥವಾ ಪ್ರದೇಶಕ್ಕೆ ಸೀಮಿತವಾಗಿಲ್ಲ. ಬಿಜೆಪಿ ಪಕ್ಷ ಒಂದು ರೈಲು ಇದ್ದಂತೆ.

ಈ ಟ್ರೇನ್ ನಲ್ಲಿ ಯಾರು ಹತ್ತುತ್ತಾರೋ ಅವರನ್ನು ಹತ್ತಿಸಿಕೊಂಡು ಹೋಗುತ್ತದೆ ಎಂದರು. ದೇಶ ಮತ್ತು ರಾಜ್ಯದ ಹಿತ ದೃಷ್ಟಿಯಿಂದ ಬಿಜೆಪಿ ಪಕ್ಷ ಕೆಲಸ ಮಾಡುತ್ತಿದೆ. ಪರೋಕ್ಷವಾಗಿ ಜೆಡಿಎಸ್ ಪಕ್ಷ ಬೆಂಬಲಿಸಿದರೆ, ಬಿಜೆಪಿ ಸ್ವಾಗತಿಸಲಿದೆ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್ಸಿಗರಲ್ಲ. ಅವರು ಜಯಪ್ರಕಾಶ್ ನಾರಾಯಣ್ ಜೊತೆಗೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದವರು. ಇವತ್ತು ರಾಜಕೀಯ ನೆಲೆ ಬೇಕಾಗಿರುವುದರಿಂದ ಇಟಾಲಿಯನ್ ಕಾಂಗ್ರೆಸ್ಸಿಗೆ ಶರಣಾಗಿದ್ದಾರೆ ಎಂದರು. ಸ್ವಾತಂತ್ರ್ಯ ಪೂರ್ವದ ಕಾಂಗ್ರೆಸ್ ಪಕ್ಷ ಇದು ಅಲ್ಲ.ಈಗಿನ ಕಾಂಗ್ರೆಸ್ ಮತ್ತೊಂದು ಈಸ್ಟ್ ಇಂಡಿಯಾ ಕಂಪನಿ ಆಗಿದೆ. ಇದರ ಬಗ್ಗೆ ಸಿದ್ದರಾಮಯ್ಯನವರೇ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com