ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ಗಟ್ಟಿಯಾಗಿಯೇ ಇದ್ದಾರೆ- ರಾಮಲಿಂಗಾ ರೆಡ್ಡಿ

ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ಗಟ್ಟಿಯಾಗಿಯೇ ಇದ್ದಾರೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ
ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ

ಬೆಂಗಳೂರು: ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ಗಟ್ಟಿಯಾಗಿಯೇ ಇದ್ದಾರೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸದಾಶಿವನಗರದ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಬೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಜೊತೆ ರಾಜಕೀಯ ಬಗ್ಗೆ ಚೆರ್ಚೆ ಮಾಡಿಲ್ಲ.ಹಾಗೆಯೇ ಅವರನ್ನು ವಿಚಾರಿಸಿಕೊಂಡು ಹೋಗಲಿಕ್ಕೆ ಬಂದಿದ್ದೆ ಎಂದರು.

ದೆಹಲಿಯಲ್ಲಿ ಡಿಕೆ ಶಿವಕುಮಾರ್ ಬಂಧನದ ಸಂದರ್ಭದಲ್ಲಿ ಆಸ್ಪತ್ರೆಗೆ ಹೋಗಿ ಭೇಟಿ ಮಾಡಿದ್ದೆ.ಇಂದು ಬಂದು ಭೇಟಿಯಾಗಿದ್ದೇನೆ. ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್​​​ನಲ್ಲಿ ಯಾವಾಗಲೂ ಗಟ್ಟಿಯಾಗಿಯೇ ಇರುತ್ತಾರೆ ಎಂದು ಅವರು ಹೇಳಿದರು.

ಇದೇ ವೇಳೆ ಮಾತನಾಡಿದ ಮಾಜಿ ಸ್ಪೀಕರ್.ಕೆ.ಬಿ.ಕೋಳಿ ವಾಡ್, ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಬಿಜೆಪಿ ಪಕ್ಷ ಅಧಿಕಾರ ದುರುಪಯೋಗಪಡಿಸಿ ಕೊಂಡು ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಹಾಗೂ ಮೋದಿ ಸರ್ಕಾರ ಪತನ ವಾಗುತ್ತದೆ. ಮೋದಿ ದಿನೇದಿನೇ ವರ್ಚಸ್ಸು ಕಳೆದುಕೊಳ್ಳುತ್ತಿ ದ್ದಾರೆ. ಶೀಘ್ರದಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ಅಕ್ಟೋಬರ್ 27ರಂದು ದೆಹಲಿ ವಿಶೇಷ ಕೋರ್ಟ್​​ ಜಾಮೀನು ನೀಡಿದ ಬಳಿಕ ರಾಜ್ಯಕ್ಕೆ ಆಗಮಿಸಿರುವ ಡಿಕೆ ಶಿವಕುಮಾರ್ ಅವರನ್ನು ಇಂದು ರಾಮಲಿಂಗಾ ರೆಡ್ಡಿ, ಸೌಮ್ಯಾ ರೆಡ್ಡಿ, ಮಾಜಿ ಸ್ಪೀಕರ್ ಕೆ.ಬಿ.ಕೋಳಿ ವಾಡ್, ಎಚ್.ಕೆ.ಪಾಟೀಲ್, ಮೋಟಮ್ಮ, ರಾಣಿ ಸತೀಶ್, ಮಾರ್ಗರೇಟ್ ಆಳ್ವಾ, ಆರ್.ವಿ.ದೇಶ ಪಾಂಡೆ, ಡಿ.ಸಿ ತಮ್ಮಣ್ಣ, ಶಿವಲಿಂಗೇಗೌಡ ಭೇಟಿ ಮಾಡಿ ಚೆರ್ಚೆ ನಡೆಸಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com