ಡಿಸೆಂಬರ್ ನಲ್ಲಿ ಮಧ್ಯಂತರ ಚುನಾವಣೆ: ಸಿದ್ದರಾಮಯ್ಯ ಭವಿಷ್ಯ

ಮಧ್ಯಂತರ ಚುನಾವಣೆ ಕುರಿತು ಮತ್ತೆ ಭವಿಷ್ಠ ನುಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಡಿಸೆಂಬರ್ ನಲ್ಲಿ ಮಧ್ಯಂತರ ಚುನಾವಣೆಗೆ ಸಿದ್ದರಾಗುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮಧ್ಯಂತರ ಚುನಾವಣೆಗೆ ಸಿದ್ಧರಾಗುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ

ಬೆಂಗಳೂರು: ಮಧ್ಯಂತರ ಚುನಾವಣೆ ಕುರಿತು ಮತ್ತೆ ಭವಿಷ್ಠ ನುಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಡಿಸೆಂಬರ್ ನಲ್ಲಿ ಮಧ್ಯಂತರ ಚುನಾವಣೆಗೆ ಸಿದ್ದರಾಗುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ 'ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದ್ದು, ಕಳೆದ ಒಂದು ತಿಂಗಳಿನಿಂದ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಸಿಎಂ ಯಡಿಯೂರಪ್ಪ ಭಿನ್ನಮತ ಶಮನದ ಕುರಿತು ಬಿಸಿಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಅಂತೆಯೇ ಅತೃಪ್ತರ ಬೆಂಬಲ ಪಡೆದು ಬಿಎಸ್ ವೈ ಸರ್ಕಾರ ರಚಿಸಿದ್ದಾಗಲೇ ನಾನು ಹೇಳಿದ್ದೆ. ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. 17 ಜನ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಹೈಜಾಕ್ ಮಾಡಿ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ಆದರೆ ಈ ಸರ್ಕಾರ ಖಂಡಿತಾ ಮೂರುವರೆ ವರ್ಷ ಪೂರ್ಣಗೊಳಿಸುವುದಿಲ್ಲ ಎಂದು ಹೇಳಿದ್ದೆ.

ಪಕ್ಷದ ಸಿದ್ಧಾಂತದ ಮೇಲೆ ಗೌರವ ಇಲ್ಲದವರು, ರಾಜಕೀಯ ಮೌಲ್ಯ, ತತ್ವಾದರ್ಶಗಳೇ ಇಲ್ಲದವರು ಸರ್ಕಾರ ರಚನೆ ಮಾಡಿದರೆ ಆ ಸರ್ಕಾರ ಸ್ಥಿರ ಸರ್ಕಾರವಾಗಿರಲು ಸಾಧ್ಯವೇ.. ಆ ಸರ್ಕಾರ ಉಳಿಯಲು ಸಾಧ್ಯವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಿನ್ನೆ ಮಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲೂ ಇದೇ ವಿಚಾರದ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಡಿಸೆಂಬರ್ ನಲ್ಲಿ ಮಧ್ಯಂತರ ಚುನಾವಣೆಗೆ ಸಿದ್ಧರಾಗುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com