ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಕಾಂಗ್ರೆಸ್ ಮುಗಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ್ ಖರ್ಗೆ

ಸರ್ಕಾರಿ ಸಂಸ್ಥೆಗಳನ್ನು ಬಿಜೆಪಿ ತನ್ನ ರಾಜಕೀಯ ದುರುದ್ದೇಶಕ್ಕೆ ಬಳಸಿಕೊಂಡು, ವಿರೋಧ ಪಕ್ಷದ ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದೆಂದು ಭಾವಿಸಿದ್ದರೆ, ಅದು ಬಿಜೆಪಿಯ ತಪ್ಪು ಕಲ್ಪನೆ ಎಂದು ಮಾಜಿ ಸಂಸದ..
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಸರ್ಕಾರಿ ಸಂಸ್ಥೆಗಳನ್ನು ಬಿಜೆಪಿ ತನ್ನ ರಾಜಕೀಯ ದುರುದ್ದೇಶಕ್ಕೆ ಬಳಸಿಕೊಂಡು, ವಿರೋಧ ಪಕ್ಷದ ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದೆಂದು ಭಾವಿಸಿದ್ದರೆ, ಅದು ಬಿಜೆಪಿಯ ತಪ್ಪು ಕಲ್ಪನೆ ಎಂದು ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

ಶಿವಕುಮಾರ್ ಬಂಧನದ ಹಿನ್ನೆಲೆಯಲ್ಲಿ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್ ಅವರನ್ನು ಷಡ್ಯಂತ್ರದ ಮೂಲಕ ಬಂಧಿಸಲಾಗಿದೆ. ಅವರನ್ನು ಬಂಧಿಸುವ ಮೂಲಕ ಭಯ ಹುಟ್ಟಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಿಜೆಪಿಯ ಇಂತಹ ನೀತಿಗೆ ಯಾವುದೇ ಕಾಂಗ್ರೆಸ್ ನಾಯಕರು ಭಯಪಡುವುದಿಲ್ಲ ಎಂದರು.

ಗುಜರಾತ್ ಶಾಸಕರಿಗೆ ಈ ಹಿಂದೆ ಡಿ.ಕೆ.ಶಿವಕುಮಾರ್ ರಕ್ಷಣೆ ನೀಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ ಎನ್ನುವುದಾದರೆ ಇತ್ತೀಚೆಗೆ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಹ  ವಸತಿ, ಸೌಲಭ್ಯ ನೀಡಿ ರಕ್ಷಣೆ ನೀಡಿದ್ದರು. ಆದರೆ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಏಕೆ ಕ್ರಮ ಕೈಗೊಳ್ಳಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

ಜಾರಿ ನಿರ್ದೇಶನಾಲಯದ ಎಲ್ಲಾ ನೋಟಿಸ್,  ಸಮನ್ಸ್ ಗಳಿಗೂ ಶಿವಕುಮಾರ್ ಸ್ಪಂದಿಸಿ, ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಆದರೆ ಅವರು ತನಿಖೆಗೆ ಸಹಕರಿಸಲಿಲ್ಲ ಎಂಬ ಸುಳ್ಳು ಕಾರಣ‌ ನೀಡಿ ಬಂಧಿಸಿರುವುದು ಸರಿಯಲ್ಲ ಎಂದು ಮಲ್ಲಿಕಾರ್ಜುನ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲಿ  ಡಿ.ಕೆ. ಶಿವಕುಮಾರ್ ಸಹೋದರ ಸಂಸದ ಡಿ‌‌‌.ಕೆ.ಸುರೇಶ್ ಮಾತನಾಡಿ, ಅಣ್ಣನನ್ನು ದುರುದ್ದೇಶಪೂರಕವಾಗಿ ಬಂಧಿಸಲಾಗಿದೆ. ಮೇಲಿನ ಆಜ್ಞೆಯಂತೆ ಜಾರಿನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಅಣ್ಣನ ಭೇಟಿಗೂ ತಮಗೆ ಅವರು ಅವಕಾಶ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕಾನೂನಿನ ಮೂಲಕ ಹೋರಾಟ ಮಾಡುತ್ತಿದ್ದು, ನಮ್ಮ ಬಳಿಯೂ ಹಲವು ಕಾರ್ಯತಂತ್ರಗಳಿಗೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com