ಬೆಂಬಲಿಗರೊಂದಿಗೆ ಪಾಕಿಸ್ತಾನಕ್ಕೆ ಹೋಗಲಿ: ಐಎಎಸ್ ಅಧಿಕಾರಿ ಶಶಿಕಾಂತ್ ವಿರುದ್ದ ಅನಂತ್ ಕುಮಾರ್ ಹೆಗ್ಡೆ ವಾಗ್ದಾಳಿ

ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅನಂತ್ ಕುಮಾರ್ ಹೆಗಡೆ, 'ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು!  ಇದು ಪ್ರಾಯೋಗಿಕವಾಗಿಯೂ ಸುಲಭ ಮತ್ತು ಅಂತಿಮ ಪರಿಹಾರ ಕೂಡ.  ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರು ನೀಯತ್ತು ತೋರಿಸಲಿ ಎಂದು ಕಿಡಿಕಾರಿದ್ದಾರೆ.

ಅಂತೆಯೇ ತನ್ನ ಕಲುಷಿತ ಮನಸ್ಥಿತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಈತನನ್ನು ರಾಜ್ಯ ಸರ್ಕಾರವೇ ಮೊದಲು ಕಿತ್ತೊಗೆಯಬೇಕು. ಕೇಂದ್ರ ಸರ್ಕಾರವನ್ನು ಫ್ಯಾಸಿಸ್ಟ್ ಎಂದು ಕರೆಯುವ ಈತನನ್ನು ನಾವು ಖಂಡಿತವಾಗಿಯೂ ಪೇಯ್ಡ್ ಗದ್ದರ್ ಎಂದು ಕರೆಯಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದ್ದ ಆರ್ಟಿಕಲ್ 370ನ್ನು ತೆಗೆದು ಹಾಕಿದ್ದು ಸೇರಿದಂತೆ ಕೇಂದ್ರ ಸರ್ಕಾರದ ಅನೇಕ ವಿಚಾರಗಳನ್ನು ಸೆಂಥಿಲ್ ವಿರೋಧಿಸಿದ್ದರು. ಇದೇ ಕಾರಣಕ್ಕೆ ತಾವು ರಾಜಿನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಸೆಂಥಿಲ್ ರಾಜಿನಾಮೆ ಪ್ರಹಸನ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com