ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ ರದ್ದು, ನಾಳೆ ಬೆಳಗಾವಿಗೆ ಭೇಟಿ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರದ ದೆಹಲಿ ಪ್ರವಾಸ ರದ್ದುಮಾಡಿದ್ದು, ನಾಳೆ ಬೆಳಗಾವಿಗೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ‌ನಿರ್ವಹಣೆ ಕುರಿತು ಪರಿಶೀಲನೆ ನಡೆಸಲಿದ್ದಾರೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರದ ದೆಹಲಿ ಪ್ರವಾಸ ರದ್ದುಮಾಡಿದ್ದು, ನಾಳೆ ಬೆಳಗಾವಿಗೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ‌ನಿರ್ವಹಣೆ ಕುರಿತು ಪರಿಶೀಲನೆ ನಡೆಸಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗಾವಿಯ ಸಾಂಬ್ರಾ ವಿಮಾನದ ನಿಲ್ದಾಣಕ್ಕೆ ತೆರಳಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಲಿದ್ದಾರೆ.

ಮಧ್ಯಾಹ್ನ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಅವರು, ಸಂಜೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com