ಕೇಂದ್ರ ಸರ್ಕಾರದ ಸೇಡಿನ ರಾಜಕಾರಣ ಸಹಿಸಲಸಾಧ್ಯ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಕಾಂಗ್ರೆಸ್ ಸಚಿವ ಡಿಕೆ ಶಿವಕುಮಾರ್ ರನ್ನು ಬಂಧಿಸುವ ಮೂಲಕ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದ್ದು, ಕೇಂದ್ರದ ಮೋದಿ ಸರ್ಕಾರದ ಈ ಕ್ರಮವನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಾಂಗ್ರೆಸ್ ಸಚಿವ ಡಿಕೆ ಶಿವಕುಮಾರ್ ರನ್ನು ಬಂಧಿಸುವ ಮೂಲಕ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದ್ದು, ಕೇಂದ್ರದ ಮೋದಿ ಸರ್ಕಾರದ ಈ ಕ್ರಮವನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಡಿಕೆಶಿ ಬಂಧನ ವಿರೋಧಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಗುಂಡೂರಾವ್ ಅವರು, 'ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡಬಾರದು ಎಂಬ ಸಂದೇಶ ಬೃಹತ್ ಜನಸಮೂಹದ ಮೂಲಕ ವ್ಯಕ್ತವಾಗಿದೆ.  ಇಲ್ಲಿ ಇಂದು 50 ಸಾವಿರದಷ್ಡು ಜನ ಸೇರಲಿದ್ದು, ಇದು ಕೇಂದ್ರಕ್ಕೆ ನೀಡುವ ಪ್ರತ್ಯುತ್ತರ ಎಂದರು. ಅಂತೆಯೇ ಕೇಂದ್ರ ಸರ್ಕಾರ ಐಟಿ. ಇಡಿ ಇಲಾಖೆ ಗಳನ್ನು ದುರ್ಬಳಕೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ. ಡಿಕೆಶಿ ಅವರು ತನಿಖೆಗೆ ಸಹಕಾರ ನೀಡಿದ ಮೇಲೂ ಅವರಿಗೆ ಕಿರುಕುಳ ನೀಡುವ ಸಲುವಾಗಿಯೇ ಅವರನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ವಿಜಯ್ ಮಲ್ಯ, ನೀರವ್ ಮೋದಿ ಪ್ರಕರಣವನ್ನು ಪ್ರಸ್ತಾಪಿಸಿದ ಗುಂಡೂರಾವ್ ಅವರು, '3 ತಿಂಗಳಲ್ಲಿ ಬ್ಯಾಂಕುಗಳಿಂದ 32 ಸಾವಿರ ಕೋಟಿ ಲೂಟಿಯಾಗಿದೆ. ಅದನ್ನು ತಡೆಯಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಅವರು ಪ್ರಶ್ನಿಸಿದರು. ವಿರೋಧ ಪಕ್ಷದವರನ್ನು ಮುಗಿಸುವ ತಂತ್ರವನ್ನು ಸಹಿಸಲು ಸಾಧ್ಯವಿಲ್ಲ. ಜನ ಇದರ ವಿರುದ್ಧ ಎದ್ದು ನಿಂತಿದ್ದಾರೆ. ಇದನ್ನು ಕೇಂದ್ರಕ್ಕೆ ತಡೆಯಲು ಸಾಧ್ಯವಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com