ಎಷ್ಟು ದಿನ ಇರ್ತೇವೆ ಅಂತ ಗೊತ್ತಿಲ್ಲ, ಇರೋವಷ್ಟು ದಿನ ಜನಪರ ಕೆಲಸ ಮಾಡ್ತೀವಿ: ಸಿ.ಟಿ ರವಿ

 ನಾವು ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇವೆ ಎನ್ನುವುದು ಮುಖ್ಯವಲ್ಲ, ಅಧಿಕಾರದಲ್ಲಿದ್ದಾಗ ಜನಪರ ಕೆಲಸ ಮಾಡಬೇಕು ಎಂದು ಸರ್ಕಾರದ ಅಸ್ಥಿತ್ವದ ಕುರಿತು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅಭಿಪ್ರಾಯಪಟ್ಟಿದ್ದಾರೆ.

Published: 14th September 2019 01:40 PM  |   Last Updated: 14th September 2019 05:41 PM   |  A+A-


C.T Ravi

ಸಿ.ಟಿ ರವಿ

Posted By : Shilpa D
Source : Online Desk

ಚಿತ್ರದುರ್ಗ: ನಾವು ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇವೆ ಎನ್ನುವುದು ಮುಖ್ಯವಲ್ಲ, ಅಧಿಕಾರದಲ್ಲಿದ್ದಾಗ ಜನಪರ ಕೆಲಸ ಮಾಡಬೇಕು ಎಂದು ಸರ್ಕಾರದ ಅಸ್ಥಿತ್ವದ ಕುರಿತು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅಭಿಪ್ರಾಯಪಟ್ಟಿದ್ದಾರೆ.

ಚಿತ್ಪದುರ್ಗದಲ್ಲಿ ಮಾತನಾಡಿದ ಅವರು, ಯಾರ ಹಣೆ ಬರಹವನ್ನು ಯಾರೂ ನಿರ್ಧರಿಸಿರುವುದಿಲ್ಲ. ಎಲ್ಲಾ ಭಗವಂತನೇ ನಿರ್ಧರಿಸಿ ಭೂಮಿಗೆ ಕಳಿಸಿರುತ್ತಾನೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕೊಟ್ಟಿರುವುದು ನ್ಯಾಯಾಲಯ. ಕಾನೂನು, ನ್ಯಾಯಾಲಯಕ್ಕಿಂತ ಯಾರೂ ಹಿರಿಯರಲ್ಲ. ಕೆಲವರು ಕಾನೂನಿಗಿಂತ ದೊಡ್ಡವರು ಅಂದುಕೊಳ್ಳುತ್ತಾರೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಡಿಕೆಶಿ ವಿಚಾರದಲ್ಲಿ ಯಾರೇ ಅವರ ಬೆನ್ನಿಗೆ ನಿಂತರೂ ನ್ಯಾಯಾಲಯವೇ ತೀರ್ಪು ಕೊಡಲಿದೆ. ಇದರಲ್ಲಿ ಯಾರೂ ಏನೂ ಮಾಡಲು ಸಾಧ್ಯವಿಲ್ಲ ಕೋರ್ಟ್ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು ಎಂದರು.

ರಾಮ ಮಂದಿರವನ್ನು ಕಟ್ಟುವುದು ನಮ್ಮ ಆದ್ಯತೆಯ ವಿಷಯ. ನಾವು ಪ್ರತಿಪಾದಿಸಿದ ವಿಚಾರವನ್ನು ಎಂದೂ ಕೈ ಬಿಟ್ಟಿಲ್ಲ. ಅಕ್ರಮಣಕಾರಿ ಅಕ್ಬರ್ ನನ್ನು ವೈಭವೀಕರಿಸುವದನ್ನು ದೇಶ ಭಕ್ತರು ಸಹಿಸಲ್ಲ. ನ್ಯಾಯಾಲಯ ಇದೀಗ ವಿಚಾರಣೆ ನಡೆಸುತ್ತಿದೆ. ರಾಮಮಂದಿರ ವಿವಾದವನ್ನು ಪರಿಹರಿಸುವ ರೀತಿಯ ತೀರ್ಪು ಸುಪ್ರೀಂ ಕೋರ್ಟ್‍ನಿಂದ ಹೊರಬೀಳಲಿದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು.

Stay up to date on all the latest ರಾಜಕೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp