ಬಿಜೆಪಿ ಸರ್ಕಾರಕ್ಕೆ ಜನರ ಶಾಪ ತಟ್ಟುವುದು ಖಚಿತ: ಎಂ ಬಿ ಪಾಟೀಲ್

ಸರ್ಕಾರದ ವೈಫಲ್ಯತೆಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದು, ಹಗರಣಗಳ ತನಿಖೆಗೆ ಆದೇಶಿಸುವ ಮೂಲಕ ವಿಷಯಾಂತರ ಮಾಡುತ್ತಿದ್ದಾರೆ ಎಂದು ಮಾಜಿ ಜಲಸಂಪನ್ಮೂಲ ಸಚಿವ, ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ.
ಎಂಬಿ ಪಾಟೀಲ್
ಎಂಬಿ ಪಾಟೀಲ್

ಬೆಂಗಳೂರು:  ಸರ್ಕಾರದ ವೈಫಲ್ಯತೆಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದು, ಹಗರಣಗಳ ತನಿಖೆಗೆ ಆದೇಶಿಸುವ ಮೂಲಕ ವಿಷಯಾಂತರ ಮಾಡುತ್ತಿದ್ದಾರೆ ಎಂದು ಮಾಜಿ ಜಲಸಂಪನ್ಮೂಲ ಸಚಿವ, ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದ ಬಡವರು, ರೈತರು ಬೀದಿಗೆ ಬಿದ್ದಿದ್ದು, ಊಟಕ್ಕೂ ಸಹ ಪರದಾಡುವಂತಾಗಿದೆ. ಗೊತ್ತುಗುರಿಯಿಲ್ಲದ ಈ ಸರ್ಕಾರದಲ್ಲಿ ಸಮಸ್ಯೆ ಬಗೆಹರಿಸುವ ಕುರಿತು ಯಾವುದೇ ಸ್ಪಷ್ಟತೆಯಿಲ್ಲ. ಇದೊಂದು ಅತ್ಯಂತ ಕೆಟ್ಟ ಸರ್ಕಾರ ಎಂದು ಟೀಕಿಸಿದರು.

ಪ್ರವಾಹ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಅನ್ಯ ವಿಷಯಗಳ ಬಗ್ಗೆ ಗಮನ ಕೇಂದ್ರೀಕರಿಸಿದೆ. ವಿಷಯಾಂತರ ಮಾಡುವ ಉದ್ದೇಶದಿಂದಲೇ ವಿವಿಧ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ತನಿಖೆಗೆ ಆದೇಶಿಸುತ್ತಿದ್ದಾರೆ.

ವಿಷಯಾಂತರದ ತಂತ್ರಗಾರಿಕೆ ಸರಿಯಲ್ಲ. ರಾಜ್ಯದಲ್ಲಿ ಬೇಕಾಬಿಟ್ಟಿಯಾಗಿ ವರ್ಗಾವಣೆ ದಂಧೆ ನಡೆಯುತ್ತಿದ್ದು, ಸರ್ಕಾರ ಈ ಬಗ್ಗೆ ಮೊದಲು ತನಿಖೆಗೆ ಆದೇಶ ನೀಡಬೇಕು. ಜನರ ಸಂಕಷ್ಟಗಳನ್ನು ಮರೆತಿರುವ ಈ ಸರ್ಕಾರಕ್ಕೆ ಜನರ ಶಾಪ ತಟ್ಟುವುದು ಖಚಿತ ಎಂದು ಎಚ್ಚರಿಕೆ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com