ಕುಮಾರಸ್ವಾಮಿ ಕೆಲ ತಪ್ಪು ಮಾಡಿದ್ರು, ಈಗ ಅದಕ್ಕಾಗಿಯೇ ಶಿಕ್ಷೆ ಅನುಭವಿಸುತ್ತಿದ್ದಾರೆ : ಎಚ್ ಡಿ ರೇವಣ್ಣ

ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಅಸ್ಥಿತ್ವವನ್ನು ನಾಶ ಮಾಡಲು ರಾಷ್ಟ್ರೀಯ ಪಕ್ಷಗಳು ಒಳ ಸಂಚು ಮಾಡುತ್ತಿದ್ದು, ಇದು ಯಶಸ್ವಿಯಾಗುವುದಿಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕುಮಾರಸ್ವಾಮಿ ಕೆಲ ತಪ್ಪು ಮಾಡಿದ್ರು, ಈಗ ಅದಕ್ಕಾಗಿಯೇ ಶಿಕ್ಷೆ ಅನುಭವಿಸುತ್ತಿದ್ದಾರೆ : ಎಚ್ ಡಿ ರೇವಣ್ಣ

ಹಾಸನ: ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಅಸ್ಥಿತ್ವವನ್ನು ನಾಶ ಮಾಡಲು ರಾಷ್ಟ್ರೀಯ ಪಕ್ಷಗಳು ಒಳ ಸಂಚು ಮಾಡುತ್ತಿದ್ದು, ಇದು ಯಶಸ್ವಿಯಾಗುವುದಿಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಜೆಡಿಎಸ್ ಪಕ್ಷ ಪ್ರಬಲವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳನ್ನು ಜನರೇ ತಿರಸ್ಕರಿಸುವ ಕಾಲ ಬರುತ್ತದೆ.ನಮ್ಮ ಪಕ್ಷದ ಕಾರ್ಯಕರ್ತರು ದೃತಿಗೆಡುವ‌ ಅಗತ್ಯವಿಲ್ಲ.ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ.ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷದ ವರಿಷ್ಠರು,ನಾಯಕರ ವಿರುದ್ಧ ನಡೆಸುತ್ತಿರುವ ಅಪಪ್ರಚಾರವನ್ನು ದೇವೇಗೌಡರು, ಕುಮಾರಸ್ವಾಮಿ ತುಂಬಾ ದಿನಗಳಿಂದ ನೋಡಿದ್ದಾರೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರದಿದ್ದರೆ 48 ಸಾವಿರ ಕೋಟಿ ರೈತರ ಸಾಲಮನ್ನಾ ಆಗುತ್ತಿರಲಿಲ್ಲ ಎಂದು ಅವರು ಬಣ್ಣಿಸಿದರು.

ಉಪ ಚುನಾವಣೆಗಳಲ್ಲಿ‌ ಕಾಂಗ್ರೆಸ್ ಜೊತೆ ಮೈತ್ರಿ ಬಗ್ಗೆ ಪಕ್ಷದ ವರಿಷ್ಠ ಎಚ್.ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಹೇಳಿದ ರೇವಣ್ಣ ಅವರು, ಡಿ.ಕೆ.ಶಿವಕುಮಾರ್ ತುಂಬಾ ಕಷ್ಟದಲ್ಲಿ ಸಿಲುಕಿದ್ದಾರೆ.ರಾಜ್ಯದಲ್ಲಿ ಮತ್ತು ದೇಶದಲ್ಲಿ ಅವರೊಬ್ಬರೇ ಆಸ್ತಿ ಗಳಿಸಿರುವುದು, ಬೇರೆ ಪಕ್ಷದಲ್ಲಿರುವವರು ಯಾರು ಆಸ್ತಿ ಮಾಡಿಲ್ಲವೇ ಎಂದು ಪ್ರಶ್ನಿಸುವ ಮೂಲಕ ಡಿಕೆ ಶಿವಕುಮಾರ್ ಬಂಧನ, ರಾಜಕೀಯ ಪ್ರೇರಿತ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com