ರಮೇಶ್ ಕುಮಾರ್ ಆದೇಶಕ್ಕೆ ವಿರುದ್ಧವಾಗಿ ಸುಪ್ರೀಂ ಕೋರ್ಟ್ ತೀರ್ಪು ಬರಲಿದೆ: ಎಚ್.ವಿಶ್ವನಾಥ್

17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಕೋರ್ಟ್ ಸೆಪ್ಟಂಬರ್ 23 ಕ್ಕೆ ಮುಂದೂಡಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದು ಗೊಳಿಸಲಿದೆ ಎಂದು ಮಾಜಿ ಅನರ್ಹ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ.

Published: 18th September 2019 09:03 AM  |   Last Updated: 18th September 2019 12:58 PM   |  A+A-


H.vishwanath

ಎಚ್,ವಿಶ್ವನಾಥ್

Posted By : Shilpa D
Source : The New Indian Express

ಮೈಸೂರು: 17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಕೋರ್ಟ್ ಸೆಪ್ಟಂಬರ್ 23 ಕ್ಕೆ ಮುಂದೂಡಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದು ಗೊಳಿಸಲಿದೆ ಎಂದು ಮಾಜಿ ಅನರ್ಹ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ.

ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಿದ ಅನರ್ಹ ಶಾಸಕರು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಪ್ರಮುಖ ಪಾತ್ರ ವಹಿಸಿದ್ದರು.

ಸುಪ್ರೀಂಕೋರ್ಟ್ ತಮ್ಮ ಪರ ತೀರ್ಪು ನೀಡಲಿದ್ದು, ಆದಷ್ಟು ಶೀಘ್ರವೇ ಯಡಿಯೂರಪ್ಪ ಅವರ ಸಂಪುಟ ಸೇರುವುದಾಗಿ ಅನರ್ಹ ಶಾಸಕರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ, 

ಮೂಲಗಳ  ಪ್ರಕಾರ ಕೆಲವು ಅನರ್ಹ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೂಡಿ ಕೇಂದ್ರ ಸಚಿವ ಅಮಿತ್ ಶಾ, ಅವರನ್ನು ಭೇಟಿ ಮಾಡಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. 

ಇನ್ನು ಪಕ್ಷದ ಹೈಕಮಾಂಡ್ ಮತ್ತು ಸಿಎಂ ಯಡಿಯೂರಪ್ಪ ಅನರ್ಹ ಶಾಸಕರಿಗೆ ಭರವಸೆ ನೀಡಿದ್ದು ತಾವು ನೀಡಿದ್ದ ಮಾತನ್ನು ಉಳಿಸಿಕೊಳ್ಳುವುದಾಗಿ ವಿಶ್ವಾಸ ತುಂಬಿದ್ದಾರೆ ಎನ್ನಲಾಗಿದೆ.

ಅರ್ಜಿ ವಿಚಾರಣೆ ಮುಂದೂಡಿರುವುದರಿಂದ ನಮಗೆ ಹಿನ್ನಡೆಯಾಗಿಲ್ಲ, ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆಯಿರುವುದಾಗಿ ಅನರ್ಹ ಶಾಸಕರಾದ ಎಸ್ ಟಿ ಸೋಮಶೇಖರ್ ಮತ್ತು ಎಚ್ ವಿಶ್ವನಾಥ್ ಹೇಳಿದ್ದಾರೆ.

ಮುಂಬರುವ ವಿಧಾನಸಭೆ ಉಪ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡಿರುವ  ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಈಗಾಗಲೇ ಹುಣಸೂರು ಕ್ಷೇತ್ರದಲ್ಲಿ ತಮ್ಮ ಕೆಲಸ ಆರಂಭಿಸಿದ್ದಾರೆ, 

Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp