ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು, ಉಪ್ಪು ತಿಂದವರು ನೀರು ಕುಡಿಯಬೇಕು: ಸಿಟಿ ರವಿ

ಉಪ್ಪು ತಿಂದವರು ನೀರು ಕುಡಿಯಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು ಇದು ಈ ನೆಲದ ಸಂಸ್ಕೃತಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ. ರವಿ ಹೇಳಿದ್ದಾರೆ.
ಸಿಟಿ ರವಿ
ಸಿಟಿ ರವಿ

ರಾಮನಗರ: ಉಪ್ಪು ತಿಂದವರು ನೀರು ಕುಡಿಯಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು ಇದು ಈ ನೆಲದ ಸಂಸ್ಕೃತಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ. ರವಿ ಹೇಳಿದ್ದಾರೆ.

ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರನ್ನು ಬಂಧನಕ್ಕೆ ಒಳಪಡಿಸಿದ್ದು ನ್ಯಾಯಾಲಯ ಬಿಜೆಪಿ ಪಕ್ಷವಲ್ಲ. ಅವರ ಬಂಧನಕ್ಕೆ ಕಾರಣವೇನು ಎಂಬುದು ಎಲ್ಲರಿಗೂ ತಿಳಿದಿದೆ. ಡಿಕೆಶಿ ಆದಾಯದ ಮೂಲದ ಬಗ್ಗೆ ಅನೇಕ ಸಂಶಯವಿದೆ ಎಂದರು.

ಡಿಕೆ ಶಿವಕುಮಾರ್ ಅವರ ದೆಹಲಿಯ ಮನೆಯಲ್ಲಿ 8.59 ಕೋಟಿ ರೂ. ಹಣ ಸಿಕ್ಕಿದೆ. ಐಟಿ ಮತ್ತು ಇಡಿ ತನಿಖೆ ವೇಳೆ 800 ಕೋಟಿ ರೂ. ಗೂ ಅಧಿಕ ಆದಾಯ ಪತ್ತೆ ಆಗಿದೆ. ಏನೇ ಆದರೂ ಜಗತ್ತಿಗೆ ನಂಬಿಸಬಹುದು. ಆದರೆ, ಆತ್ಮಸಾಕ್ಷಿ ಸತ್ಯವನ್ನು ಹೇಳುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.

ತಪ್ಪು ಮಾಡಿದವರಿಗೆ ಶಿಕ್ಷೆ ಆಗಬಾರದು ಎಂದು ಕಾಂಗ್ರೆಸ್ ಪಕ್ಷದ ನಾಯಕರು ಬಯಸಿದರೆ ಅದು ಈ ನೆಲದ ಕಾನೂನಿಗೆ ವಿರುದ್ಧವಾಗುತ್ತದೆ. ತಪ್ಪು ಮಾಡಿದ ಎಲ್ಲರಿಗೂ ಒಂದೇ ಕಾನೂನು. ದೇಶದ 132 ಕೋಟಿ ಜನರಿಗೂ ಇದು ಅನ್ವಯಿಸುತ್ತದೆ. ಇದರಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಪಾತ್ರವಿಲ್ಲ. ಯಾರೇ ತಪ್ಪು ಮಾಡಿದರು ಶಿಕ್ಷೆ ಅನುಭವಿಸಬೇಕು. ಆದರೆ, ರಾಜಕೀಯದಿಂದ ಬಂಧಿಸಿದ್ದಾರೆ ಎಂದು ಹೇಳುವುದು ಹಾಸ್ಯಾಸ್ಪದವಾಗುತ್ತದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com