ಉಪ ಚುನಾವಣೆಯಲ್ಲಿ ಅನರ್ಹಗೊಂಡ ಎಲ್ಲಾ ಶಾಸಕರು ಬಿಜೆಪಿಯಿಂದ ಸ್ಪರ್ಧೆ: ಪ್ರಹ್ಲಾದ್ ಜೋಶಿ

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ಉಪ ಚುನಾವಣೆ ಘೋಷಣೆಯಾಗಿದ್ದು, ಅನರ್ಹಗೊಂಡ ಬಹುತೇಕ ಎಲ್ಲಾ ಶಾಸಕರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ...
ಪ್ರಹ್ಲಾದ್ ಜೋಷಿ
ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ಉಪ ಚುನಾವಣೆ ಘೋಷಣೆಯಾಗಿದ್ದು, ಅನರ್ಹಗೊಂಡ ಬಹುತೇಕ ಎಲ್ಲಾ ಶಾಸಕರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ.

ಉಪ ಚುನಾವಣೆ ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ಬಹುತೇಕ ಅನರ್ಹಗೊಂಡ ಶಾಸಕರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಮತ್ತು ಇದು ನನ್ನ ವೈಯಕ್ತಿಕ ಅಭಿಪ್ರಾಯ. ಕೋರ್ಟ್ ನಲ್ಲಿ ಅನರ್ಹ ಶಾಸಕರ ಪರವಾಗಿ ತೀರ್ಪು ಬರುತ್ತದೆ ಎಂಬ ವಿಶ್ವಾಸವಿದೆ ಎಂದರು.

ಉಪ ಚುನಾವಣೆಗೆ ಬಿಜೆಪಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.

ಕಾಂಗ್ರೆಸ್ - ಜೆಡಿಎಸ್ ರಾಜೀನಾಮೆಯಿಂದ ತೆರವಾದ 17 ವಿಧಾನಸಭಾ ಕ್ಷೇತ್ರಗಳ ಪೈಕಿ  ಕೇಂದ್ರ ಚುನಾವಣಾ ಆಯೋಗ 15 ಕ್ಷೇತ್ರಗಳಿಗೆ ಆಕ್ಟೋಬರ್ 21ರಂದು ಉಪಚುನಾವಣೆ ಘೋಷಿಸಿದೆ. 

ಈ ಮಧ್ಯೆ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಆದರೆ ಅನರ್ಹ ಶಾಸಕರು ಸ್ಪೀಕರ್ ಆದೇಶಕ್ಕೆ ಸುಪ್ರೀಂ ಕೋರ್ಟ್ ನಿಂದ ತಡೆಯಾಜ್ಞೆ ತರುವ ವಿಶ್ವಾಸದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com