ಡಿಕೆ ಶಿವಕುಮಾರ್ ನನ್ನ ರಾಜಕೀಯ 'ಗುರು'- ಲಕ್ಷ್ಮಿ: ಹೆಬ್ಬಾಳ್ಕರ್ ವಿರುದ್ಧ ಕೇಸ್ ದಾಖಲು?

ಡಿಕೆ ಶಿವಕುಮಾರ್‌ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶುಕ್ರವಾರ ಎರಡನೇ ದಿನವೂ ವಿಚಾರಣೆಗೊಳಪಡಿಸಿದರು. 
ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು/ ಬೆಳಗಾವಿ: ಡಿಕೆ ಶಿವಕುಮಾರ್‌ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶುಕ್ರವಾರ ಎರಡನೇ ದಿನವೂ ವಿಚಾರಣೆಗೊಳಪಡಿಸಿದರು. 

ಲಕ್ಷ್ಮಿ ಅವರನ್ನು ಸುಮಾರು 7 ವರೆ ಗಂಟೆಗಳ ಕಾಲ ವಿಚಾರಣೆಗೊಳಪಡಿಸಲಾಗಿತ್ತು. ಡಿಕೆ ಶಿವಕುಮಾರ್ ನನ್ನ ರಾಜಕೀಯ ಗುರು, ನಾನು ರಾಜಕೀಯವಾಗಿ ಬೆಳೆಯಲು ಅವರು ನನಗೆ ಸಹಾಯ ಮಾಡಿದ್ದಾರೆ, ಅವರ ಜೊತೆ ಯಾವುದೇ ಹಣಕಾಸಿನ ವಹಿವಾಟು ಇಲ್ಲ ಎಂದು ಹೇಳಿದ್ದಾರೆ.

ತಮ್ಮ ವ್ಯವಹಾರಕ್ಕೆ ಸಂಬಂಧಿಸಿದ  ಎಲ್ಲಾ ರೀತಿಯ ದಾಖಲೆಗಳನ್ನು ಇಡಿ ಅಧಿಕಾರಿಗಳಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ,. ಆದರೆ ಮೂಲಗಳ ಪ್ರಕಾರ ಅಕ್ರಮ ಹಣ ವರ್ಗಾವಣೆ ಕಾಯ್ದೆಯ  ಅಡಿಯಲ್ಲಿ ಇಡಿ ಅಧಿಕಾರಿಗಳು ಹೆಬ್ಬಾಳ್ಕರ್ ವಿರುದ್ಧ ಕೇಸು ದಾಖಲಿಸಿದ್ದಾರೆ ಎಂದು ಮೂಲಗಳ ಮಾಹಿತಿಯಿಂದ ತಿಳಿದು ಬಂದಿದೆ.

ಹಣಕಾಸಿನ ವಹಿವಾಟು ಸಂಬಂಧ ಕೇಳಿದ ಪ್ರಮುಖ ಪ್ರಶ್ನೆಗಳಿಗೆ ಹೆಬ್ಬಾಳ್ಕರ್ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಅವರ ವಿರುದ್ದ  ಕೇಶು ದಾಖಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com