ಉಪ ಚುನಾವಣೆ: ಕಾಂಗ್ರೆಸ್ ಜತೆ ಮೈತ್ರಿಗೆ ಗೌಡರ ಒಲವು

ರಾಜ್ಯದಲ್ಲಿ ಎದುರಾಗಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾತುಕತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಾಂಗ್ರೆಸ್ ಕದ ತಟ್ಟಿದ್ದಾರೆ. 

Published: 21st September 2019 07:20 PM  |   Last Updated: 21st September 2019 07:20 PM   |  A+A-


JDS supremo Devegowda shows interest to forge alliance with congress for by polls

ಉಪ ಚುನಾವಣೆ: ಕಾಂಗ್ರೆಸ್ ಜತೆ ಮೈತ್ರಿಗೆ ಗೌಡರ ಒಲವು

Posted By : Srinivas Rao BV
Source : Online Desk

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾತುಕತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಾಂಗ್ರೆಸ್ ಕದ ತಟ್ಟಿದ್ದಾರೆ. ಉಪ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಯಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಮನಗಂಡಿರುವ ಗೌಡರು ಇದೀಗ ಕಾಂಗ್ರೆಸ್ ಜತೆ ಸ್ನೇಹ ಹಸ್ತ ಚಾಚಿದ್ದಾರೆ.

ಉಪಚುನಾವಣೆಗೆ ಮೈತ್ರಿ ಬಗ್ಗೆ ಕಾಂಗ್ರೆಸ್ ನಿಂದ ಇನ್ನೂ ಸ್ಪಷ್ಟ ನಿರ್ಧಾರ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮತ್ತೊಮ್ಮೆ ಕಾಂಗ್ರೆಸ್ ಕದ ಬಡಿದಿದ್ದು, ಆದಷ್ಟು ಬೇಗ ಒಂದು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಮಾಜಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ 
 

Stay up to date on all the latest ರಾಜಕೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp