ಅನರ್ಹರನ್ನು ಬಚಾವ್ ಮಾಡಲು ಯಡಿಯೂರಪ್ಪ ಬಳಿ ಸಮಯವಿದೆ- ಎಚ್ ಡಿ ಕುಮಾರಸ್ವಾಮಿ ಲೇವಡಿ
ರಾಜ್ಯದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಬಗ್ಗೆ ದೆಹಲಿ ನಾಯಕರ ಜೊತೆ ಮಾತನಾಡಲು ಯಡಿಯೂರಪ್ಪ ಅವರಿಗೆ ಸಮಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Published: 22nd September 2019 02:42 PM | Last Updated: 22nd September 2019 02:42 PM | A+A A-

ಬೆಂಗಳೂರು: ರಾಜ್ಯದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಬಗ್ಗೆ ದೆಹಲಿ ನಾಯಕರ ಜೊತೆ ಮಾತನಾಡಲು ಯಡಿಯೂರಪ್ಪ ಅವರಿಗೆ ಸಮಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ,ಅನರ್ಹ ಶಾಸಕರ ಜೊತೆಗೆ ರಹಸ್ಯ ಸಭೆ ನಡೆಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಸಂತ್ರಸ್ತರ ಬದುಕು ಕಟ್ಟಿಕೊಡುವ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹೇರಲು ಅವರ ಬಳಿ ಸಮಯಾವಕಾಶವೇ ಇಲ್ಲ ಎಂದು ಅವರು ಲೇವಡಿ ಮಾಡಿದ್ದಾರೆ.
ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತರಳಿದ್ದೇನೆ ಎಂದಿರುವುದು ಒಂದು 'ರಾಜಕೀಯ ನಾಟಕ'. ಅಮಿತ್ ಶಾ ರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲಷ್ಟೇ BSY ದೆಹಲಿಗೆ ಹೋಗಿದ್ದಾರೆ.
— H D Kumaraswamy (@hd_kumaraswamy) September 22, 2019