ಕರ್ನಾಟಕಕ್ಕೆ ಉತ್ತಮ ಭವಿಷ್ಯವಿದೆ- ಜೆಪಿ ನಡ್ಡಾ
ಕರ್ನಾಟಕಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಹೇಳಿದ್ದಾರೆ.ದೇಶದ ಅಭಿವೃದ್ದಿಯಲ್ಲಿ ಕರ್ನಾಟಕದ ಕೊಡುಗೆ ಮಹತ್ತರವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂದರು.
Published: 22nd September 2019 02:09 PM | Last Updated: 22nd September 2019 02:09 PM | A+A A-

ಜೆಪಿ ನಡ್ಡಾ
ಬೆಂಗಳೂರು: ಕರ್ನಾಟಕಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಹೇಳಿದ್ದಾರೆ.
ಇಂದು ಬೆಳಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜೆಪಿ ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ,ಶಾಸಕರಾದ ಎಸ್.ಆರ್. ವಿಶ್ವನಾಥ್ ಮತ್ತಿತರರು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಅಭಿವೃದ್ದಿಯಲ್ಲಿ ಕರ್ನಾಟಕದ ಕೊಡುಗೆ ಮಹತ್ತರವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂದರು.
ಉಪ ಚುನಾವಣೆಗೆ ಪಕ್ಷ ಸಂಘಟನೆ ಕುರಿತು ರಾಜ್ಯದ ಬಿಜೆಪಿ ನಾಯಕರ ಜೊತೆ ಚರ್ಚೆ, ಜಮ್ಮು- ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ನಿರ್ಧಾರದ ಮಹತ್ವ ಕುರಿತು ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಜೆಪಿ ನಡ್ಡಾ ಪಾಲ್ಗೊಳ್ಳಲಿದ್ದಾರೆ.