ಕೆ.ಆರ್ ಪೇಟೆಯಿಂದ ದೇವೇಗೌಡರ ಪುತ್ರಿ ಅನಸೂಯ ಮಂಜುನಾಥ್, ಹಿರೇಕೆರೂರ್ ನಿಂದ ಬಿಸಿ ಪಾಟೀಲ್ ಮಗಳು ಕಣಕ್ಕೆ

ಜೆಡಿಎಸ್-ಕಾಂಗ್ರೆಸ್ ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ, ಆದರೆ ಸುಪ್ರಿಂಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ತೀರ್ಪು ಇನ್ನೂ ನಿರ್ಧಾರವಾಗದ ಕಾರಣ ಶಾಸಕರು ಅಡಕತ್ತರಿಯಲ್ಲಿ ಸಿಲುಕಿದಂತಾಗಿದ್ದಾರೆ.
ಬಿಸಿ ಪಾಟೀಲ್  ಪುತ್ರಿ ಸೃಷ್ಟಿ ಪಾಟೀಲ್
ಬಿಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ, ಆದರೆ ಸುಪ್ರಿಂಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ತೀರ್ಪು ಇನ್ನೂ ನಿರ್ಧಾರವಾಗದ ಕಾರಣ ಶಾಸಕರು ಅಡಕತ್ತರಿಯಲ್ಲಿ ಸಿಲುಕಿದಂತಾಗಿದ್ದಾರೆ.

ಅನರ್ಹ ಶಾಸಕರು ತಮ್ಮ ಸಂಬಂಧಿಕರನ್ನು ಕಣಕ್ಕಿಳಿಸಲು ಚಿಂತಿಸುತ್ತಿದ್ದಾರೆ, ಬಿಜೆಪಿ ಕೂಡ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದೆ. ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ಅನರ್ಹಗೊಂಡಿದ್ದು, ಕಾಂಗ್ರೆಸ್ ಲಖನ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ಹಿರೇಕೆರೂರು ಶಾಸಕ ಬಿಸಿ ಪಾಟೀಲ್ ತಮ್ಮ ಪುತ್ರಿ ಸೃಷ್ಠಿ ಪಾಟೀಲ್ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ.

ಕೆ.ಆರ್ ಪೇಟೆ ಅನರ್ಹ ಶಾಸಕ  ನಾರಾಯಣಗೌಡ ಕೂಡ ತಮ್ಮ ಸಂಬಂಧಿಕರನ್ನ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ, ಆದರೆ ಜೆಡಿಎಸ್ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಮುಂದಾಗುತ್ತಿಲ್ಲ,

ಕೆ.ಆರ್ ಪೇಟೆಯಲ್ಲಿ ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡರ ಪುತ್ರಿ ಅನಸೂಯ ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಸಿದ್ದತೆ ನಡೆಸುತ್ತಿದ್ದಾರೆ, ಅನರ್ಹ ಶಾಸಕ ನಾರಾಯಣ ಗೌಡ  ತಮ್ಮ ಪತ್ನಿ ದೇವಕಿ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಲಾಭಿ ನಡೆಸುತ್ತಿದ್ದಾರೆ. ಎಚ್. ವಿಶ್ವನಾಥ್ ಮತ್ತು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ತಮ್ಮ ಪುತ್ರರಿಗೆ ಟಿಕೆಟ್ ಕೊಡಿಸಲು ಹರ ಸಾಹಸ ಪಡುತ್ತಿದ್ದಾರೆ.

ಇನ್ನೂ ಅಥಣಿಯಿಂದ ಡಿಸಿಎಂ ಲಕ್ಷ್ಮಣ ಸವದಿ ಕಣಕ್ಕಿಳಿಲಿಸಲು ಚಿಂತನೆ ನಡೆಸುತ್ತಿದ್ದಾರೆ, ಯಲ್ಲಾಪುರದಲ್ಲಿ ಅನರ್ಹ ಶಾಸಕರ ಶಿವರಾಮ್ ಹೆಬ್ಬಾರ್ ತಮ್ಮ ಪುತ್ರ ವಿವೇಕ್ ಹೆಬ್ಬಾರ್ ಅವರನ್ನು ಮುಂಚೂಣಿಗೆ ತರಲು ಪ್ರಯತ್ನಿಸುತ್ತಿದ್ದಾರೆ, ಒಂದು ವೇಳೆ ಟಿಕೆಟ್ ಸಿಗದಿದ್ದರೇ ಅನರ ಪತ್ನಿ ವನಜಾಕ್ಷಿ ಅವರಿಗೆ ಟಿಕೆಟ್ ಕೊಡಿಸಲು  ಪ್ರಯತ್ನಿಸುತ್ತಿದ್ದಾರೆ.  ಅನರ್ಹ ಶಾಸಕರು ತಮ್ಮ ಕ್ಷೇತ್ರಗಳನ್ನು ತಮ್ಮಲ್ಲೇ ಉಳಿಸಿಕೊಳ್ಳಲು ತಮ್ಮ ಸಂಬಂಧಿಗಳನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ, ಪಕ್ಷಗಳು ಕೂಡ ಇದ್ ಉತ್ತಮ ಎಂಬ ನಿರ್ಧಾರಕ್ಕೆ ಬಂದಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com