ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಎಚ್‌.ಡಿ.ದೇವೇಗೌಡ ಕಿಡಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿರುವುದನ್ನು ಕಟುವಾಗಿ ಟೀಕಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಯಡಿಯೂರಪ್ಪ ಸಂತ್ರಸ್ತರ ಸಂಕಷ್ಟಕ್ಕೆ ಕೇಂದ್ರದ ಬಾಗಿಲು ಬಡಿಯುವುದಿಲ್ಲ. ಆದರೆ...
ದೇವೇಗೌಡ
ದೇವೇಗೌಡ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿರುವುದನ್ನು ಕಟುವಾಗಿ ಟೀಕಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಯಡಿಯೂರಪ್ಪ ಸಂತ್ರಸ್ತರ ಸಂಕಷ್ಟಕ್ಕೆ ಕೇಂದ್ರದ ಬಾಗಿಲು ಬಡಿಯುವುದಿಲ್ಲ. ಆದರೆ ಅನರ್ಹ ಶಾಸಕರ ಪರ ವಕಾಲತ್ತು ವಹಿಸಲು ಮಾತ್ರ ಅಮಿತ್ ಷಾ ಭೇಟಿ ಮಾಡಿರುವುದು ಖಂಡನೀಯ ಎಂದು ಹರಿಹಾಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಸರ್ಕಾರದಲ್ಲಿ ಕುರ್ಚಿ ಉಳಿಸಿಕೊಳ್ಳುವುದೇ ಮುಖ್ಯವಾಗಿದೆಯೇ ಹೊರತು ರಾಜ್ಯದ ಜನರನ್ನಲ್ಲ. ಮುಖ್ಯಮಂತ್ರಿಯಾದವರಿಗೆ ರಾಜ್ಯದ ಜನರ ಬಗ್ಗೆ ಕಾಳಜಿ ಇರಬೇಕು. ಅದನ್ನು ಬಿಟ್ಟು ಪಕ್ಷಕ್ಕೆ ದ್ರೋಹ ಎಸಗಿ ಹೋದವರ ಪರ ಕಸರತ್ತು ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಕುರ್ಚಿ ಉಳಿಸಿಕೊಳ್ಳಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ಅವರಿಗೆ ರಾಜ್ಯದ ಜನರ ಸಂಕಷ್ಟ ಬೇಕಾಗಿಲ್ಲ. ಸರ್ಕಾರ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಲು ಸಿದ್ಧರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com