ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಎಚ್.ವಿ. ಮಂಜುನಾಥ್ ದಿಢೀರ್ ರಾಜೀನಾಮೆ

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷ  ಎಚ್.ವಿ.ಮಂಜುನಾಥ್ ತಮ್ಮ ಸ್ಥಾನಕ್ಕೆ ಸೋಮವಾರ ಹಠಾತ್ ರಾಜಿನಾಮೆ ಸಲ್ಲಿಸಿದ್ದಾರೆ. 
ಮಂಜುನಾಥ್
ಮಂಜುನಾಥ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷ  ಎಚ್.ವಿ.ಮಂಜುನಾಥ್ ತಮ್ಮ ಸ್ಥಾನಕ್ಕೆ ಸೋಮವಾರ ಹಠಾತ್ ರಾಜಿನಾಮೆ ಸಲ್ಲಿಸಿದ್ದಾರೆ. 

ಕಾಂಗ್ರೆಸ್  ಹೈಕಮಾಂಡ್ ಆದೇಶ ಮೇರೆಗೆ ರಾಜಿನಾಮೆ ಸಲ್ಲಿಸಿರುವುದಾಗಿ ಮಂಜುನಾಥ್ ತಿಳಿಸಿದ್ದಾರೆ.
 
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಉಮಮಹದೇವ್ ಅವರಿಗೆ ರಾಜಿನಾಮೆ ಸಲ್ಲಿಸಿದ್ದಾರೆ.
 
ಈ ಹಿಂದೆ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದ ಎಚ್.ವಿ.ಮಂಜುನಾಥ್ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರ ರಾಜೀನಾಮೆ ಗೊಂದಲದ  ಹಿನ್ನೆಲೆಯಲ್ಲಿ ತಮ್ಮ ರಾಜೀನಾಮೆ ವಾಪಸ್ ಪಡೆದಿದ್ದರು.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎಚ್.ವಿ. ಮಂಜನಾಥ್, ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ಪಕ್ಷ ಸೂಚಿಸಿದ ಹಿನ್ನೆಲೆಯಲ್ಲಿ ಮತ್ತೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದಿದ್ದೆ. ಈ ಅವಧಿಯಲ್ಲೂ ಈ ಸ್ಥಾನದಿಂದ ತಮ್ಮ ಕರ್ತವ್ಯವನ್ನು ಆತ್ಮಸಾಕ್ಷಿಗನುಗುಣವಾಗಿ ನಿರ್ವಹಿಸಿದ್ದೇನೆ ಎಂದಿದ್ದಾರೆ.

ಆ ತಾತ್ಕಾಲಿಕ ಅವಧಿ ಮುಗಿದಿದ್ದು, ಇಂದಿನಿಂದ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದೇನೆ. ಅವಕಾಶ ಕಲ್ಪಿಸಿದ ಪಕ್ಷದ ನಿರ್ದೇಶನಗಳಿಗೆ ಬದ್ಧರಾಗಿ ನಡೆಯುವುದು ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಹಾಗೂ ಸಾರ್ವಜನಿಕ ಜೀವನದ ನೀತಿ ಸಂಹಿತೆಯ ಭಾಗವೆಂದು ಭಾವಿಸುತ್ತೇನೆ. ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ. 

ಮೂರು ಹಂತಗಳ ಪಂಚಾಯ್ತಿರಾಜ್ ವ್ಯವಸ್ಥೆ ಯಶಸ್ವಿಯಾಗಿ ಅಧಿಕಾರ ವಿಕೇಂದ್ರೀಕರಣದ ಆಶಯಗಳು ಈಡೇರಬೇಕೆಂದರೆ ಜನಪ್ರತಿನಿಧಿಗಳಿಗೆ ಇನ್ನೂ ಹೆಚ್ಚಿನ ಸ್ವಾತಂತ್ರ್ಯ, ಅನುದಾನ ಮತ್ತು ಸಮಯ ಇರಬೇಕೆಂಬ ನನ್ನ ಈ ಹಿಂದಿನ ಅನಿಸಿಕೆಯನ್ನು ಮತ್ತೊಮ್ಮೆ ಪುನರುಚ್ಚರಿಸಬಯಸುತ್ತೇನೆ. ಹಾಗೆಯೇ ಅಧಿಕಾರ ವಿಕೇಂದ್ರೀಕರಣದ ಉದ್ದೇಶವನ್ನು ತಳಮಟ್ಟದ ಜನಪ್ರತಿನಿಧಿಗಳು ಮನಗಾಣದಿದ್ದರೂ ಅಪಾಯವಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಮಾರ್ಗದರ್ಶನದಲ್ಲಿ ಸಾರ್ವಜನಿಕ ಚರ್ಚೆ ನಡೆಯಲಿ ಎಂದು ಆಶಿಸುತ್ತೇನೆ ಎಂದು ಮಂಜುನಾಥ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com