ಚಡ್ಡಿ ಒಗೆದರೆ ಪರವಾಗಿಲ್ಲ, ಆದರೆ ಕಂಡ ಕಂಡ ಕಡೆ ಅದನ್ನು ಬಿಚ್ಚಬಾರದು: ಸಾ.ರಾ. ಮಹೇಶ್ ಟಾಂಗ್

ನಾನು ನಿಮಗಿಂತ ಏಕವಚನದಲ್ಲಿ ಮಾತಾಡಬಲ್ಲೆ. ಆದರೆ ನಮ್ಮ ತಂದೆ ಸಂಸ್ಕಾರ ಕಲಿಸಿದ್ದಾರೆ ಅದಕ್ಕೆ ಮಾತನಾಡಲ್ಲ. ಚಾಮುಂಡಿ ಬೆಟ್ಟದಲ್ಲಿ ಪ್ರಮಾಣ ಮಾಡಿ ಸಾಕು ನಾನು ರಾಜಕೀಯ ಜೀವನದಿಂದ ನಿವೃತ್ತಿ ಪಡೆಯುತ್ತೇನೆ. ನಾನಾ ಅಯೋಗ್ಯ ನೀವಾ ಎಂಬುದು ತೀರ್ಮಾನವಾಗಲಿ.

Published: 23rd September 2019 01:07 PM  |   Last Updated: 23rd September 2019 01:23 PM   |  A+A-


Sa.ra Mahesh

ಸಾ.ರಾ ಮಹೇಶ್

Posted By : Shilpa D
Source : Online Desk

ಮೈಸೂರು: ನಾನು ನಿಮಗಿಂತ ಏಕವಚನದಲ್ಲಿ ಮಾತಾಡಬಲ್ಲೆ. ಆದರೆ ನಮ್ಮ ತಂದೆ ಸಂಸ್ಕಾರ ಕಲಿಸಿದ್ದಾರೆ ಅದಕ್ಕೆ ಮಾತನಾಡಲ್ಲ. ಚಾಮುಂಡಿ ಬೆಟ್ಟದಲ್ಲಿ ಪ್ರಮಾಣ ಮಾಡಿ ಸಾಕು ನಾನು ರಾಜಕೀಯ ಜೀವನದಿಂದ ನಿವೃತ್ತಿ ಪಡೆಯುತ್ತೇನೆ. ನಾನಾ ಅಯೋಗ್ಯ ನೀವಾ ಎಂಬುದು ತೀರ್ಮಾನವಾಗಲಿ. ಚಡ್ಡಿ ಒಗೆದರೆ ಪರವಾಗಿಲ್ಲ. ಆದರೆ ಕಂಡ ಕಂಡ ಕಡೆ ಅದನ್ನು ಬಿಚ್ಚಬಾರದು ಮಾಜಿ ಸಚಿವ ಸಾರಾ ಮಹೇಶ್ ಅವರು ಅನರ್ಹ ಶಾಸಕ ಹೆಚ್ ವಿಶ್ವನಾಥ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಾರಾ ಮಹೇಶ್, ನಿಮ್ಮ ಯೋಗ್ಯತೆ ಮೈಸೂರು ಮತ್ತು ಮಡಿಕೇರಿ ಜನರಿಗೆ ಗೊತ್ತಿದೆ. ಕೊಚ್ಚೆ ಗುಂಡಿ ನೀವು, ನಿಮ್ಮ ಬಗ್ಗೆ ಮಾತನಾಡಿದರೆ ನಮ್ಮ ಬಾಯಿ ಹೊಲಸಾಗುತ್ತೆ. ನನ್ನ ವೈಯಕ್ತಿಕ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಕಿಡಿಕಾರಿದರು.ಯಾವ ಹೀರೋಯಿನ್ ಜೊತೆ ಯಾವ ರೀತಿ ಮಾತನಾಡಿದ್ದೀರಿ ಅನ್ನೋ ದಾಖಲೆ ಇದೆ ಹೆಚ್ ವಿಶ್ವನಾಥ್ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಶ್ವನಾಥ್ ಅತೃಪ್ತ ಪ್ರೇತಾತ್ಮ. ತಾನು ಮಾಡಿದ ತಪ್ಪನ್ನು ಬೇರೆಯವರ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ವೈಯಕ್ತಿಕವಾಗಿ ನನ್ನ ತೇಜೋವಧೆ ಮಾಡುತ್ತಿದ್ದಾರೆ. ವಿಶ್ವನಾಥ್ ಬಾಯಿ ಬಿಟ್ಟರೆ ಸುಳ್ಳು ಹೇಳುತ್ತಾರೆ. ಬನ್ನಿ ಚಾಮುಂಡಿ ಬೆಟ್ಟಕ್ಕೆ, ನಾನು ಯಾವುದೇ ಆಸೆ, ಆಮಿಷಗಳಿಗೂ ಬಲಿಯಾಗಿಲ್ಲ. ನನಗೆ ಮಂತ್ರಿ ಸ್ಥಾನ ಬೇಡ ಎಂದು ಚಾಮುಂಡಿ ದೇವಿ ಮುಂದೆ ಪ್ರಮಾಣ ಮಾಡಿ ಹೇಳಿ ಎಂದು ಸವಾಲ್ ಹಾಕಿದರು.

ಯಾವ ಹೀರೋಯಿನ್ ಜೊತೆ ಹೇಗೆ ಮಾತಾಡಿದ್ದೀರಿ ಅನ್ನೋ ದಾಖಲೆ ಇದೆ. ನಿಮ್ಮಂಥ ಜೀವನ ನಾನು ಮಾಡಿದರೆ ಇಷ್ಟೊತ್ತಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ. ನೀವು ಸೆಕ್ಸ್ ಫಿಲಂ ಹೀರೋ. ನೀವು ಬ್ಲೂ ಬಾಯ್. ಯಾವ ಪುಣ್ಯಾತ್ಮ ನಿಮಗೆ ಹಳ್ಳಿ ಹಕ್ಕಿ ಎಂದು ಹೆಸರಿಟ್ಟನೋ. ಚಳಿಗಾಲದಲ್ಲಿ ಒಂದು ಗೂಡು, ಮಳೆಗಾಲದಲ್ಲಿ ಒಂದು ಗೂಡು, ಬೇಸಿಗೆ ಕಾಲದಲ್ಲಿ ಒಂದು ಗೂಡು ಹುಡುಕಿ ಕೊಳ್ಳುತ್ತೀರಾ ಎಂದು ಟಾಂಗ್ ನೀಡಿದ್ದಾರೆ.

Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp