ಡಿಕೆಶಿ ಭೇಟಿಗೆ ಸಿಗದ ಅವಕಾಶ, ಡಿ.ಕೆ.ಶಿವಕುಮಾರ್ ಇಂದು ಬಿಡುಗಡೆ: ದೇವೇಗೌಡ ವಿಶ್ವಾಸ

ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು. ಬಿಜೆಪಿಯನ್ನು ವಿರೋಧಿಸುವವರ ವಿರುದ್ಧ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಆರೋಪಿಸಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು:  ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು. ಬಿಜೆಪಿಯನ್ನು ವಿರೋಧಿಸುವವರ ವಿರುದ್ಧ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಆರೋಪಿಸಿದ್ದಾರೆ.

ದೆಹಲಿ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಸಂಸದ ಡಿ.ಕೆ.ಸುರೇಶ್ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹಲವಾರು ತೀರ್ಥ ಕ್ಷೇತ್ರದಲ್ಲಿ ಪೂಜೆ ಮಾಡಿಸಿಕೊಂಡು ಬಂದಿದ್ದೇನೆ. ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇಂದು ಬಿಡುಗಡೆಯಾಗುವ ವಿಶ್ವಾಸವಿದೆ ಎಂದರು.

ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿರುವುದು ಹೊಸದೇನಲ್ಲ. ಕಳೆದ ಐದು ವರ್ಷಗಳಿಂದ ಬಿಜೆಪಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ನಾನು ಹೇಳುವ ಅಗತ್ಯವಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು. ಬಿಜೆಪಿ ವಿರೋಧಿಸುವವರ ವಿರುದ್ಧ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದರು.

ತಿಹಾರ್ ಜೈಲಿನಲ್ಲಿರುವ ಶಿವಕುಮಾರ್ ಭೇಟಿಯಾಗಲು ಕಾಲಾವಕಾಶ ದೊರೆಯಲಿಲ್ಲ. ಡಿ.ಕೆ.ಶಿವಕುಮಾರ್ ಭೇಟಿ ಮಾಡುವ ಉದ್ದೇಶದಿಂದ ದೆಹಲಿಗೆ ಬಂದಿದ್ದೆ. ಆದರೆ ಎರಡು ದಿನ ಮೊದಲೇ ಅನುಮತಿ ಪಡೆಯಬೇಕೆಂದು ಜೈಲು ಅಧಿಕಾರಿಗಳು ಹೇಳಿದ ಕಾರಣ ಭೇಟಿ ಸಾಧ್ಯವಾಗಲಿಲ್ಲ ಎಂದು ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ.

ದೇವೇಗೌಡರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಿ.ಕೆ. ಸುರೇಶ್, ಮಾಜಿ ಪ್ರಧಾನಿ ದೇವೇಗೌಡ, ಎಚ್‌.ಡಿ. ರೇವಣ್ಣ ಅವರು ಶಿವಕುಮಾರ್ ಭೇಟಿಯಾಗಲು ಬಂದಿದ್ದರು. ಆದರೆ ಕಾಲಾವಕಾಶ ಇಲ್ಲದಿದ್ದರಿಂದ ಭೇಟಿ ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಸಹ ಕರೆ ಮಾಡಿ ನನ್ನ ಜತೆ ಮಾತನಾಡಿದ್ದಾರೆ. ಇಂದು ಜಾಮೀನು ಅರ್ಜಿ ತೀರ್ಪು ಇದೆ. ನಾವು ಸಹ ಡಿಕೆಶಿ ಬಿಡುಗಡೆ ಯಾಗುವ ವಿಶ್ವಾಸದಲ್ಲಿದ್ದೇವೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com