ಅನರ್ಹರ ಪರ ನಿಂತ ಆಯೋಗ: ಸ್ವಾಯತ್ತತೆ ಸಂಸ್ಥೆಯೊಂದರ ವೈಫ್ಲ್ಯಕ್ಕೆ ದ್ಯೋತಕ-ದೇವೇಗೌಡ

ಚುನಾವಣಾ ಆಯೋಗವೇ ನ್ಯಾಯಾಲಯದಲ್ಲಿ ಅನರ್ಹರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ಸ್ವಯಂಪ್ರೇರಿತವಾಗಿ ಹೇಳಿಕೆ ಕೊಟ್ಟಿರುವುದನ್ನು ನೋಡಿದರೆ ಸ್ವತಂತ್ರ ಸ್ವಾಯತ್ತತೆ ಸಂಸ್ಥೆಯೊಂದು ವಿಫಲವಾಗಿರುವುದು ಸ್ಪಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ದೇವೇಗೌಡ
ದೇವೇಗೌಡ

ಬೆಂಗಳೂರು: ಚುನಾವಣಾ ಆಯೋಗವೇ ನ್ಯಾಯಾಲಯದಲ್ಲಿ ಅನರ್ಹರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ಸ್ವಯಂಪ್ರೇರಿತವಾಗಿ ಹೇಳಿಕೆ ಕೊಟ್ಟಿರುವುದನ್ನು ನೋಡಿದರೆ ಸ್ವತಂತ್ರ ಸ್ವಾಯತ್ತತೆ ಸಂಸ್ಥೆಯೊಂದು ವಿಫಲವಾಗಿರುವುದು ಸ್ಪಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಜೆ.ಪಿ.ಭವನದಲ್ಲಿ ಸುಪ್ರೀಂಕೋರ್ಟ್ ಆದೇಶ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಎರಡೂ ಕಡೆ ವಾದ ವಿವಾದ ಆಲಿಸಿ ನಂತರ ಉಪ ಚುನಾವಣೆಗೆ ತಡೆಯಾಜ್ಞೆ ನೀಡಿದೆ ಎಂಬುದು ತಮ್ಮ ಗಮನಕ್ಕೆ ಬಂದಿದೆ. ನ್ಯಾಯಾಧೀಶರು ವಿಚಾರಣೆ ಮುಂದೆ ಹಾಕಿದ್ದಾರೆ. ಶಾಸಕರ ರಾಜೀನಾಮೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪ್ರಭಾವವೂ ಇದೆ. ಚುನಾವಣಾ ಆಯೋಗವೇ ಸ್ವಯಂಪ್ರೇರಿತವಾಗಿ ನ್ಯಾಯಾಲಯಕ್ಕೆ ಹೋಗಿ ಅನರ್ಹರು ಚುನಾವಣೆಗೆ ಸ್ಪರ್ಧಿಸಲು ಅಭ್ಯಂತರವಿಲ್ಲ‌ ಎಂದು ಹೇಳಿದ ಮೇಲೆ ಯಾರು ಏನು ಮಾಡಲು ಸಾಧ್ಯ ಹೇಳಿ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಚುನಾವಣೆ ಆಯೋಗ ಸ್ವತಂತ್ರ ಸ್ವಾಯತ್ತ ಸಂಸ್ಥೆ. ಆದರೂ ಅನರ್ಹರ ಪರ ಹೇಳಿಕೆ ನೀಡಿದ್ದು ಸರಿಯಲ್ಲ ಎಂದರು.

ಅಲ್ಲದೆ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸರ್ಕಾರದ ಪ್ರಭಾವದಿಂದಾಗಿ ರಾಜ್ಯ ಉಪಚುನಾವಣೆ ಮುಂದೂಡಲ್ಪಟ್ಟಿದೆ ಎಂದು ದೇವೇಗೌಡರು ಆರೋಪಿಸಿದ್ದಾರೆ. ಆದರೆ ನ್ಯಾಯಾಲಯದ ತೀರ್ಪಿನ ಪ್ರತಿ ಓದಿದ ಬ್ಳಿಕ ಣಾನು ನ್ಯಾಯಾಲಯದ ತೀರ್ಮಾನದ ಬಗೆಗೆ ಮಾತನಾಡುವೆ ಎಂದು ಸಮಜಾಯಿಷಿಯನ್ನೂ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com