ನಿನ್ನ ನೋಡ್ಕೋತೀನಿ, ಹೋಗಲೋ: ಕೆಸಿವಿ ಎದುರೇ ಏಕವಚನದಲ್ಲಿ ಕಚ್ಚಾಡಿಕೊಂಡ ಸಿದ್ದರಾಮಯ್ಯ- ಮುನಿಯಪ್ಪ 

ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಸಿದ್ದು, ಈ ಸಭೆಯಲ್ಲಿ ಕೈ ನಾಯಕರ ನಡುವಿನ ಅಸಮಾಧಾನ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರ ಎದುರೇ ಸ್ಫೋಟಗೊಂಡಿದೆ.
ಕೆಪಿಸಿಸಿ ಸಭೆ
ಕೆಪಿಸಿಸಿ ಸಭೆ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಸಿದ್ದು, ಈ ಸಭೆಯಲ್ಲಿ ಕೈ ನಾಯಕರ ನಡುವಿನ ಅಸಮಾಧಾನ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರ ಎದುರೇ ಸ್ಫೋಟಗೊಂಡಿದೆ.

ಸಭೆ ಆರಂಭಕ್ಕೂ ಮುನ್ನ ಕೈ ನಾಯಕರ ನಡುವೆ ಗಲಾಟೆ ನಡೆದಿದ್ದು, ಪರಮೇಶ್ವರ್ ಗೆ ಕಾಯುತ್ತಿರುವಾಗಲೇ ಸಂಸದ ಬಿ.ಕೆ.ಹರಿಪ್ರಸಾದ್ ಅವರು ದಿನೇಶ್ ಗುಂಡೂರಾವ್ ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ

ಇದರ ಬೆನ್ನಲ್ಲೇ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ರೋಷನ್ ಬೇಗ್ ವಿರುದ್ಧ ಕ್ರಮ ತೆಗೆದುಕೊಂಡಿದ್ದೀರಿ. ನನ್ನನ್ನು ಸೋಲಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮತ್ತು ತಂಡದ ವಿರುದ್ಧ ದೂರು ಕೊಟ್ಟರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಇದೇ ವೇಳೆ ಮುನಿಯಪ್ಪ ಕೂಡ ಗರಂ ಆದರು. ರಮೇಶ್ ಕುಮಾರ್ ನನ್ನ ಪಕ್ಕದಲ್ಲಿ ಕೂರಿಸಿಕೊಂಡು ಮೀಟಿಂಗ್ ಮಾಡುತ್ತೀರಲ್ವ. ಪಕ್ಷದಲ್ಲಿ ಒಬ್ಬೊಬ್ಬರಿಗೆ ಒಂದು ನ್ಯಾಯನಾ ಎಂದು ಪ್ರಶ್ನಿಸಿ ದಿನೇಶ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಮದ್ಯ ಪ್ರವೇಶಿಸಿದ ದಿನೇಶ್ ಗುಂಡೂರಾವ್ ಆ ವಿಷಯಗಳನ್ನೆಲ್ಲ ಚರ್ಚಿಸಲು ಇದು ವೇದಿಕೆಯಲ್ಲ ಎಂದು ಮುನಿಯಪ್ಪ ಅವರನ್ನು ಸಮಾಧಾನ ಮಾಡಲು ಯತ್ನಿಸಿದ್ದಾರೆ. ಆದರೆ ಅಷ್ಟಕ್ಕೆ ಸುಮ್ಮನಾಗದ ಮುನಿಯಸ್ಸಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ , ನನ್ನ ಸೋಲಿಗೆ ಕಾರಣ ಸಿದ್ದರಾಮಯ್ಯ,  ನನ್ನನ್ನು ಸೋಲಿಸಲು ಜೆಡಿಎಸ್ ಶಾಸಕ ಶ್ರೀನಿವಾಸ ಗೌಡನಿಗೆ ಸಿದ್ದರಾಮಯ್ಯ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ ಎಂದು ಮುನಿಯಪ್ಪ ಆರೋಪಿಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಸಿದ್ದರಾಮಯ್ಯ, ಏಯ್‌ ಮುನಿಯಪ್ಪ ಕುತ್ಕೊಳೋ, ನೀನು ಸರಿಯಾಗಿ ಮಾತನಾಡು, ಗೆಲ್ಲಲು ಆಗದಿದ್ದರು ಮಾತನಾಡುತ್ತೀಯಾ” ಆವಾಜ್ ಹಾಕಿದ್ದಾರೆ,. ಇದರಿಂದ ಮತ್ತಷ್ಟು ವ್ಯಗ್ರನಾದ ಮುನಿಯಪ್ಪ “ಕಳ್ಳರನ್ನ ಪಕ್ಕದಲ್ಲಿ ಕೂರಿಸಿಕೊಳ್ಳುವ ನೀನ್ಯಾವ ಸೀಮೆ ನಾಯಕ”, “ಸಾಕು ಕೂತ್ಕೋಳೋ, ನೀನ್ ಯಾವನೋ ಹೇಳೋಕೆ, ಎಲ್ಲಿಂದಲೋ ಬಂದು ನನ್ ಎದುರೇ ಮಾತಾಡ್ತಿಯಾ, ನನ್ನನ್ನು ಸೋಲಿಸಿದ್ದು ನೀನೇ, ಕಳ್ಳಾಟ ಆಡುತ್ತೀಯಾ”  ನಿನ್ನ ನೋಡ್ಕೋತಿನಿ ಎಂದು ಎಚ್ಚರಿಕೆ ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com