ಪಾದರಾಯನಪುರ ಗಲಭೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆವಾಜ್, ಪತರಗುಟ್ಟಿದ ಶಾಸಕ ಜಮೀರ್ ಅಹ್ಮದ್!

ಪಾದರಾಯನಪುರ ಗಲಭೆಗೆ ಸಂಬಂಧಿಸಿದಂತೆ ಪುಂಡರನ್ನು ಸಮರ್ಥಿಸಿಕೊಂಡಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡ ನಂತರ ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. 
ಡಿಕೆ ಶಿವಕುಮಾರ್-ಜಮೀರ್
ಡಿಕೆ ಶಿವಕುಮಾರ್-ಜಮೀರ್
Updated on

ಬೆಂಗಳೂರು: ಪಾದರಾಯನಪುರ ಗಲಭೆಗೆ ಸಂಬಂಧಿಸಿದಂತೆ ಪುಂಡರನ್ನು ಸಮರ್ಥಿಸಿಕೊಂಡಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡ ನಂತರ ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. 

ಪಾದರಾಯನಪುರ ದೊಂಬಿ ಬಳಿಕ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ತುರ್ತು ಸಭೆ ನಡೆಸಿದ್ದ ಶಿವಕುಮಾರ್ ಅವರು ನಂತರ ಜಮೀರ್ ಅಹ್ಮದ್ ಖಾನ್ ಗೆ ದೂರವಾಣಿ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದರು. ನಂತರ ಜ್ಞಾನೋದಯವಾದಂತೆ ಇಂದು ಟ್ವೀಟ್ ಗಳನ್ನು ಮಾಡಿದ್ದಾರೆ. 

ಪಾದರಾಯನಪುರದಲ್ಲಿ ಇಂಥದ್ದೊಂದು ಘಟನೆ ನಡೆದಿದೆ ಎಂದು ನಂಬಲು ನನ್ನಿಂದ ಸಾಧ್ಯವಾಗುತ್ತಿಲ್ಲ. ತಮ್ಮನ್ನು ಉಳಿಸಲು ಬಂದವರ ಮೇಲೆ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ. ನಾನು ಯಾರಿಗೂ ನನ್ನ ಅಪ್ಪಣೆ ಪಡೆದು ಚಾಮರಾಜಪೇಟೆಗೆ ಬರಬೇಕು ಎಂದು ಎಲ್ಲಿಯೂ ನಾನು ಹೇಳಿಲ್ಲ ಎಂದು ಹೇಳಿದ್ದಾರೆ. 

ನನ್ನು ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು ಇದರಿಂದ ನನಗೆ ಸಾಕಷ್ಟು ನೋವಾಗಿದೆ. ಲಾಕ್ ಡೌನ್ ಪ್ರಾರಂಭವಾದ ದಿನದಿಂದ ಇಲ್ಲಿಯವರೆಗೂ ರಾತ್ರಿ-ಹಗಲೆನ್ನದೆ ದುಡಿಯುತ್ತಿದ್ದೇನೆ ಎಂದರು ಹೇಳಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com