

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಜನ್ಮದಲ್ಲಿ ಮತ್ತೆ ಮುಖ್ಯ ಮಂತ್ರಿಯಾಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸುವ ಹುನ್ನಾರ ನಡೆಸಲಾಗುತ್ತಿದೆ ಎಂಬ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಬುಧವಾರ ವಿಧಾನಸೌಧದಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿ ಮೇಲೆ ವ್ಯಾಮೋಹ ಹೋಗಿಲ್ಲ.ಈ ಜನ್ಮದಲ್ಲಿ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ.ಸಿದ್ದರಾಮಯ್ಯ ಹೇಳಿಕೆಯು ಬಾಲಿಶ ಹೇಳಿಕೆಯಾಗಿದೆ ಎಂದು ಟೀಕಾಪ್ರಹಾರ ನಡೆಸಿದರು.
ಬಿಜೆಪಿ-ಕೆಜೆಪಿ ಪರಿಣಾಮ ಸಿದ್ದರಾಮಯ್ಯ ಆಕಸ್ಮಿಕವಾಗಿ ಮುಖ್ಯಮಂತ್ರಿಯಾದರು.ಆ ಸ್ಥಾನವನ್ನು ಅವರು ಉಳಿಸಿಕೊಂಡಿಲ್ಲ.ಕಾಂಗ್ರೆಸ್ ಪಕ್ಷವನ್ನು ಮುಳುಗಿಸಿದರು.ಸಿದ್ದರಾಮಯ್ಯ ಅವಧಿಯಲ್ಲಿಯೇ ಗುಂಪುಗಾರಿಕೆ ಹೆಚ್ಚಾಗಿದೆ.ಅವರಿಂದಲೇ ಧರ್ಮಗಳ ನಡುವೆ ಗಲಭೆಗಳು ನಡೆಯುತ್ತಿದೆ ಎಂದರು.
ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿಕೆಯು ಕಾಂಗ್ರೆಸ್ ಅವರಿಗೆ ನಾಚಿಕೆಯಾಗಬೇಕು. ನಮ್ಮ ನಾಯಕರು ಯಾರು ನನ್ನ ಬೆಂಬಲಕ್ಕೆ ಬಂದಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು.ಡಿ.ಜೆ.ಹಳ್ಳಿಯಲ್ಲಿ ನಡೆದಿರುವ ಘಟನೆಯು ಕೋಮುಗಲಭೆಯಲ್ಲ,ಅದು ಮತಾಂಧರ ದೊಂಬಿ.ಈ ಘಟನೆಯನ್ನು ಕಾಂಗ್ರೆಸ್ ಖಂಡಿಸಿಲ್ಲ ಎಂದು ಅವರು ಹರಿಹಾಯ್ದರು.
Advertisement