ನಿಮ್ಮ ಅವಧಿಯಲ್ಲಿ 3,800 ರೈತರು ಆತ್ಮಹತ್ಯೆ, ಗಡದ್ದಾಗಿ ನಿದ್ದೆ ಮಾಡೋರಿಗೆ ಇದೆಲ್ಲಾ ತಿಳಿಯಲ್ಲ: ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು

ನಿಮ್ಮ ಅವಧಿಯಲ್ಲೇ 3,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಡದ್ದಾಗಿ ನಿದ್ದೆ ಮಾಡುತ್ತಿದ್ದ ನಿಮಗೀಗ ಇದ್ದಕ್ಕಿಂತೆಯೇ ರೈತರ ಮೇಲೆ ಪ್ರೇಮ ಉಕ್ಕಿದೆ ಅಲ್ಲವೇ? ಎಂದು ಸಿದ್ದರಾಮಯ್ಯಗೆ ಬಿಜೆಪಿ ತಿರಗೇಟು ನೀಡಿದೆ.
ಬಿಜೆಪಿ
ಬಿಜೆಪಿ
Updated on: 

ಬೆಂಗಳೂರು: ನಿಮ್ಮ ಅವಧಿಯಲ್ಲೇ 3,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಡದ್ದಾಗಿ ನಿದ್ದೆ ಮಾಡುತ್ತಿದ್ದ ನಿಮಗೀಗ ಇದ್ದಕ್ಕಿಂತೆಯೇ ರೈತರ ಮೇಲೆ ಪ್ರೇಮ ಉಕ್ಕಿದೆ ಅಲ್ಲವೇ? ಎಂದು ಸಿದ್ದರಾಮಯ್ಯಗೆ ಬಿಜೆಪಿ ತಿರಗೇಟು ನೀಡಿದೆ.

ಕೃಷಿ ಸಚಿವ ಬಿಸಿ ಪಾಟೀಲ್ ಅವರು ಪೊನ್ನಂಪೇಟೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು ನಿಜವಾದ ಹೇಡಿಗಳು ಯಾರು? ರೈತರೋ? ಅಥವಾ ರಾತ್ರೋ ರಾತ್ರಿ ಮುಂಬೈಗೆ ಹಾರಿದವರೋ? ಕೊರೊನಾ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಸರಕಾರವೋ? ಎಂದು ಕೃಷಿ ಸಚಿವ ಬಿಸಿ ಪಾಟೀಲ್ ರನ್ನು ಪ್ರಶ್ನಿಸಿತ್ತು.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ನಿಜವಾದ ಹೇಡಿಗಳು ಯಾರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲು ಕೇಳದವರೋ? ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ? ಪರಿಹಾರ ಕೇಳಿದ್ದಕ್ಕೆ ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವವರೋ? ರಾಜ್ಯದ ಸಮಸ್ಯೆ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕದ ಬಿಜೆಪಿ ಸಂಸದರೋ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com