ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ: ಸಚಿವ ಸೋಮಶೇಖರ್ 

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಆಗಿರುವ ಅರುಣ್ ಸಿಂಗ್ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಭೇಟಿ ಮಾಡಿ ಅಭಿನಂದಿಸಿದರು. ಇದೇ ವೇಳೆ ಭಾರತ ಸಂವಿಧಾನ ಕೃತಿ ನೀಡಿ ಗೌರವಿಸಿದರು. 
ಎಸ್. ಟಿ. ಸೋಮಶೇಖರ್
ಎಸ್. ಟಿ. ಸೋಮಶೇಖರ್
Updated on

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಆಗಿರುವ ಅರುಣ್ ಸಿಂಗ್ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಭೇಟಿ ಮಾಡಿ ಅಭಿನಂದಿಸಿದರು. ಇದೇ ವೇಳೆ ಭಾರತ ಸಂವಿಧಾನ ಕೃತಿ ನೀಡಿ ಗೌರವಿಸಿದರು. 

ಗ್ರಾಮ ಸ್ವರಾಜ್ಯ ಸಮಾವೇಶದ ಬಗ್ಗೆ ಮಾಹಿತಿ ನೀಡಿದ ಸಚಿವರು, ಕಾವೇರಿ ಕೊಳ್ಳದ ಪ್ರಾಂತ್ಯ ಹಾಗೂ ಹಳೇ ಮೈಸೂರು ಭಾಗದಲ್ಲಿ ಪ್ರಸಕ್ತ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸ್ಥಾನವನ್ನು ಗೆಲ್ಲಲಿದ್ದಾರೆ ಎಂದು ತಿಳಿಸಿದರು.

ಕಂದಾಯ ಸಚಿವ ಆರ್. ಅಶೋಕ್ ಅವರ ನೇತೃತ್ವದಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಮೈಸೂರು ವಿಭಾಗದಲ್ಲಿ ನಡೆಸಲಾಗಿದ್ದು, ಪೌರಾಡಳಿತ ಸಚಿವ ನಾರಾಯಣಗೌಡ, ಆಹಾರ ಸಚಿವ ಗೋಪಾಲಯ್ಯ, ಬಿಜೆಪಿ ಉಪಾಧ್ಯಕ್ಷ ವಿಜಯಕೇಂದ್ರ ಅವರು, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್ ಹಾಗೂ ಎಸ್ ಸಿ ಮೋರ್ಚಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರ ತಂಡದೊಂದಿಗೆ ಪ್ರತಿ ಜಿಲ್ಲೆಗೆ ಭೇಟಿ ನೀಡಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com