ವಿಪಕ್ಷಗಳ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ: ಡಾ. ಕೆ.ಸುಧಾಕರ್

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದ್ದು ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸಚಿವ ಸುಧಾಕರ್
ಸಚಿವ ಸುಧಾಕರ್
Updated on

ಬೆಂಗಳೂರು: ಈ ಹಿಂದೇ ತಾವೇ ಬೆಂಬಲಿಸಿದ್ದ ಸುಧಾರಣೆಗಳನ್ನು ಈಗ ವಿನಾಕಾರಣ ವಿರೋಧಿಸುತ್ತಿರುವ ವಿಪಕ್ಷಗಳ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದ್ದು ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಡಿಎಂಕೆ ಪ್ರಣಾಳಿಕೆ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಆಮ್ರಿಂದರ್ ಸಿಂಗ್ ಅವರ ಹೇಳಿಕೆಗಳೂ ಈ ಹಿಂದೆ ಈ ಸುಧಾರಣೆಗಳನ್ನು ಬೆಂಬಲಿಸಿದ್ದವು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈಗಾಗಲೇ ನವೆಂಬರ್ 23ರಂದು ಕೇಂದ್ರದ ಮಸೂದೆಗಳು ಜಾರಿಗೆ ಬರುವಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಯುಪಿಎ ಅಧಿಕಾರದಲ್ಲಿದ್ದಾಗ ಇದೇ ರೀತಿಯ ಕೃಷಿ ಸುಧಾರಣೆಗಳನ್ನು ತರಲು ಮುಂದಾಗಿತ್ತು ಮತ್ತು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೂ ಇದೇ ಭರವಸೆ ನೀಡಲಾಗಿತ್ತು. ಅಂದಿನ ಕೇಂದ್ರ ಕೃಷಿ ಸಚಿವರಾಗಿದ್ದ ಶರದ್ ಪವಾರ್ ಅವರು ಈ ಸುಧಾರಣೆಗಳನ್ನು ತರಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಜನರ ವಿಶ್ವಾಸ ಕಳೆದುಕೊಂಡು ಚುನಾವಣೆಗಳಲ್ಲಿ ಸತತ ಸೋಲುಗಳಿಂದ ಹತಾಶಗೊಂಡಿರುವ ವಿಪಕ್ಷಗಳು ರೈತರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿವೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ವಿಸ್ತೃತ ಮಾರುಕಟ್ಟೆ ಕಲ್ಪಿಸಿ, ಅನ್ನದಾತರ ಆದಾಯ ಹೆಚ್ಚಿಸುವ ಸದುದ್ದೇಶ ಹೊಂದಿದ್ದು, ಈಗಿರುವ ಎಪಿಎಂಸಿ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಸಹ ಮುಂದುವರೆಯಲಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com