ರಾಜಕೀಯ

ಸದನದಲ್ಲಿ ಗೂಂಡಾಗಿರಿಗೆ ಬಿಜೆಪಿ ಜೊತೆ ಜೆಡಿಎಸ್ ಸಹ ಕಾರಣ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

ಸದನದಲ್ಲಿ ಗೂಂಡಾಗಿರಿಗೆ ಬಿಜೆಪಿ ಜೊತೆ ಜೆಡಿಎಸ್ ಸಹ ಕಾರಣ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಮೇಲ್ಮನೆಯಲ್ಲಿ ಇಂತಹ ಪರಿಸ್ಥಿತಿ ಎದುರಾಗಿರಲಿಲ್ಲ. ಇಂತಹ ಗೂಂಡಾಗಿರಿಯನ್ನು ಹಿಂದೆಂದೂ ನೋಡಿಲ್ಲ. ಸದನದಲ್ಲಿನ ದೂಂಡಾವರ್ತನೆಗೆ ಜೆಡಿಎಸ್ ಕಾರಣ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಾಗಿಲು ಹಾಕಿ ಸಭಾಪತಿ ಅವರನ್ನು ಸದನದ ಒಳಗಡೆ ಬರದಂತೆ ತಡೆದಿರುವುದು ಕಾನೂನು ಬಾಹಿರ. ಸಭಾಪತಿಯನ್ನೇ ಸದನದೊಳಗೆ ಬರದಂತೆ ತಡೆದಿದ್ದು ನಿಯಮಬಾಹಿರ ನಡೆಯಾಗಿದೆ. ಸಭಾಪತಿ ಇದ್ದಾಗ ಉಪಸಭಾಪತಿ ಕೂರುವಂತಿಲ್ಲ. ಸಭಾಪತಿಗಳಿಗೆ ಏನಾದರೂ ಸಮಸ್ಯೆ ಇದ್ದಾಗ  ಇಲ್ಲವೇ ಸಭಾಪತಿ ಹೇಳಿದಾಗ ಮಾತ್ರ ಉಪಸಭಾಪತಿ ಪೀಠದಲ್ಲಿ ಕೂತು ಕಲಾಪ ನಡೆಸಬೇಕು ಎಂದರು.

ಸಭಾಪತಿಗಳಿದ್ದಾಗಲೂ ಉಪಸಭಾಪತಿಗಳನ್ನು ಪೀಠದಲ್ಲಿ ಕೂರಿಸಿದ್ದು ಸಂವಿಧಾನ, ಪ್ರಜಾಪ್ರಭುತ್ವ, ಕಾನೂನು ಬಾಹಿರ ನಡೆಯಾಗಿದೆ. ಬಿಜೆಪಿಯವರು ಕಲಾಪದ ನಿಯಮಗಳನ್ನು ಪಾಲಿಸುತ್ತಿಲ್ಲ. ಬಿಜೆಪಿಯ ನಡೆ ಕಾನೂನುಬಾಹಿರ. ಇದನ್ನು ಖಂಡಿಸುವುದಾಗಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.