ಮಿಠಾಯಿ ಕೊಡುವವರ ಕಡೆ ಹೋಗುವ ಕೂಸು ಜೆಡಿಎಸ್: ವಿಶ್ವನಾಥ್ ಲೇವಡಿ

ಜೆಡಿಎಸ್ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಮಗು. ಆ ಮಗುವಿಗೆ ಯಾರು ಮಿಠಾಯಿ ಕೊಡುತ್ತಾರೋ ಅಂತಹವರ ಕಡೆಗೆ ಹೋಗುತ್ತದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಹೆಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ.
ವಿಶ್ವನಾಥ್
ವಿಶ್ವನಾಥ್
Updated on

ಮೈಸೂರು: ಜೆಡಿಎಸ್ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಮಗು. ಆ ಮಗುವಿಗೆ ಯಾರು ಮಿಠಾಯಿ ಕೊಡುತ್ತಾರೋ ಅಂತಹವರ ಕಡೆಗೆ ಹೋಗುತ್ತದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಹೆಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ವಿಧಾನ ಪರಿಷತ್‌ನಲ್ಲಿ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಬೆಂಬಲ ನೀಡಿದಕ್ಕೆ  ವಿಶ್ವನಾಥ್ ಕುಹಕವಾಡಿದ್ದಾರೆ.

"ನಮ್ಮ ಪ್ರಧಾನಿಯವರು ಲೋಕಸಭೆಗೆ ಪ್ರವೇಶಿಸುವಾಗ ನಮಸ್ಕರಿಸುತ್ತಾರೆ. ಅಂತಹ ಪ್ರಜಾಪ್ರಭುತ್ವದ ಸದನದ ಬಾಗಿಲನ್ನು ಬೂಟು ಕಾಲಿನಲ್ಲಿ ಇಲ್ಲಿ ಒದೆಯುತ್ತಾರೆ. ಬಹಳ ವಿಷಾದನೀಯ ಘಟನೆಯದು"ಎಂದು ವಿಶ್ವನಾಥ್ ಬೇಸರ ವ್ಯಕ್ತ ಪಡಿಸಿದರು.

ದೇಶದ ಎಲ್ಲ ಸದನಗಳನ್ನು ನಮ್ಮ ವಿಧಾನ ಪರಿಷತ್ ಮೀರಿ ನಿಂತಿದೆ. ತನ್ನದೇ ಆದ ಸಂಸ್ಕೃತಿಯನ್ನು ಇಡೀ ದೇಶದಲ್ಲಿ ಬಿಂಬಿಸಿದೆ. ಅಂತಹ ವಿಧಾನ ಪರಿಷತ್ ವಿಶಿಷ್ಠ ಸ್ಥಾನ ಹೊಂದಿರುವ ನಾವೆಲ್ಲರೂ ಸೇರಿ ಕಳೆದಿದ್ದೇವೆ ಎಂದು ಹೇಳಿದರು. ಜನತಂತ್ರ ವ್ಯವಸ್ಥೆಯ ಬಗ್ಗೆ ಭಾಷಣ ಮಾಡಿದವರಿಂದಲೇ ನಿನ್ನೆ ಅದನ್ನು ಸದನದಲ್ಲಿ ಕೊಚ್ಚಿ ಕೊಂದಿದ್ದಾರೆ. ಸದನವನ್ನು ನಾವು ದೇವಾಲಯವೆಂದು ಕೊಂಡಿದ್ದೇವೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com