ನರೇಂದ್ರ ಮೋದಿ
ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಆಧುನಿಕ ಭಸ್ಮಾಸುರ: ಉಗ್ರಪ್ಪ ಲೇವಡಿ

ಜನಪರ, ರೈತಪರ ಕಾನೂನುಗಳನ್ನು ಜನವಿರೋಧಿಯಾಗಿ ಮಾರ್ಪಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಆಧುನಿಕ‌ ಭಸ್ಮಾಸುರ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಟೀಕಿಸಿದ್ದಾರೆ. 

ಬಳ್ಳಾರಿ: ಜನಪರ, ರೈತಪರ ಕಾನೂನುಗಳನ್ನು ಜನವಿರೋಧಿಯಾಗಿ ಮಾರ್ಪಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಆಧುನಿಕ‌ ಭಸ್ಮಾಸುರ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಟೀಕಿಸಿದ್ದಾರೆ. 

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ದೇಶದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸುವುದಾಗಿ ಹೇಳಿದ್ದ ಮೋದಿ ಅಧೋಗತಿಗೆ ಕೊಂಡೊಯ್ದಿದ್ದಾರೆ. ಉದ್ಯೋಗ ಸೃಷ್ಟಿಯೂ ಆಗಿಲ್ಲ. ನಿವ್ವಳ ದೇಶೀಯ ಉತ್ಪನ್ನ(ಜಿಡಿಪಿ) ಕುಸಿದಿದೆ ಎಂದು ದೂರಿದ್ದಾರೆ.

ಪ್ರತಿ ವರ್ಷ ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ನೀಡಿದ್ದ ಭರವಸೆ ಈಡೇರಲಿಲ್ಲ. ಇರುವ ಉದ್ಯೋಗಗಳೂ ಹೋಗುತ್ತಿವೆ. ನೋಟು ರದ್ದತಿಯಿಂದ ಕಪ್ಪು ಹಣದ ಪತ್ತೆಯೂ ಆಗಲಿಲ್ಲ. ಬಡವರ ಖಾತೆಗೆ ಹಣವೂ ಬರಲಿಲ್ಲ' ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

'ಇಂದಿರಾಗಾಂಧಿಯವರ ಅವಧಿಯಲ್ಲಿ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ರಾಜ್ಯದ ಸಾವಿರಾರು ರೈತರ ಬದುಕನ್ನು ಕಾಂಗ್ರೆಸ್ ಸರ್ಕಾರ ಉತ್ತಮಪಡಿಸಿತ್ತು. ಆದರೆ ಈಗ
ಕೃಷಿ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ಪ್ರಧಾನಿ ಮೋದಿ ರೈತರ ಬದುಕಿನ ಮೇಲೆ ಮರಣ ಶಾಸನ ಬರೆದಿದೆ ಎಂದು ಆಪಾದಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com