ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೇಲ್ಮನೆಯಲ್ಲಿ ಗದ್ದಲ: ಸಭಾಪತಿ ನೋಟಿಸ್ ಗೆ ಸ್ಪಷ್ಟೀಕರಣ ನೀಡಿದ ಕಾರ್ಯದರ್ಶಿ

ಡಿಸೆಂಬರ್ 15 ರಂದು ವಿಧಾನ ಪರಿಷತ್ತಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ನೋಟಿಸ್ ನೀಡಿದ್ದ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರಿಗೆ ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಪತ್ರದ ಮೂಲಕ ಉತ್ತರ ನೀಡಿದ್ದಾರೆ.

ಬೆಂಗಳೂರು: ಡಿಸೆಂಬರ್ 15 ರಂದು ವಿಧಾನ ಪರಿಷತ್ತಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ನೋಟಿಸ್ ನೀಡಿದ್ದ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರಿಗೆ ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಪತ್ರದ ಮೂಲಕ ಉತ್ತರ ನೀಡಿದ್ದಾರೆ.

ಸಭಾಪತಿಗೆ ಮೂರು ಪುಟಗಳ ಪತ್ರದ ಮೂಲಕ ಸದನದಲ್ಲಿ ನಡೆದ ಘಟನೆಯ ಬಗ್ಗೆ ವಿವರಣೆ ನೀಡಿದ್ದಾರೆ ಎನ್ನಲಾಗಿದ್ದು, ಈ ಪ್ರಕರಣದಲ್ಲಿ ತಮ್ಮಿಂದ ಯಾವುದೇ ತಪ್ಪಾಗಿಲ್ಲ ಎನ್ನುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಸದನದ ಬೆಲ್ ನಡೆಯುತ್ತಿರುವಾಗಲೇ ಉಪ ಸಭಾಪತಿ ಧರ್ಮೇಗೌಡರು ಸಭಾಪತಿ ಸ್ಥಾನದ ಮೇಲೆ ಕುಳಿತಿರುವುದರ ಹಿಂದೆ ಷಡ್ಯಂತ್ರ ಇದೆ, ಹಾಗೂ ಅದರಲ್ಲಿ ಕಾರ್ಯದರ್ಶಿಗಳೂ ಭಾಗಿಯಾರುವ ಬಗ್ಗೆ ಸಭಾಪತಿ ಅನುಮಾನ ವ್ಯಕ್ತಪಡಿಸಿ ಸೂಕ್ತ ಮಾಹಿತಿ ನೀಡುವಂತೆ ನೊಟೀಸ್ ನೀಡಿದ್ದರು.

ಉಪ ಸಭಾಪತಿಗಳು ಸಭಾಪತಿ ಪೀಠದ ಮೇಲೆ ಕುಳಿತುಕೊಂಡಾಗ ಅವರಿಗೆ ಸಭಾಪತಿ ಇರುವಾಗ ತಾವು ಕೂಡಬೇಕೊ ಬೇಡವೋ ಎನ್ನುವ ಮಾಹಿತಿಯ ಪತ್ರ ನೀಡಿರುವುದಾಗಿ ಕಾರ್ಯದರ್ಶಿ ಸಭಾಪತಿ ನೋಟಿಸ್ ಸ್ಪಷ್ಟೀಕರಣ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸದನದಲ್ಲಿ ಗಲಾಟೆ ನಡೆದ ಸಂದರ್ಭದಲ್ಲಿ ಸಚಿವರು ಹಿರಿಯ ಸದಸ್ಯರು ಹಾಜರಿದ್ದರು ಎಂಬ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಆ ಸಂದರ್ಭದಲ್ಲಿ ತಮ್ಮಿಂದ ಯಾವುದೇ ಲೋಪವಾಗಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com