ಸಿದ್ದರಾಮಯ್ಯ
ಸಿದ್ದರಾಮಯ್ಯ

ಸಿದ್ದರಾಮಯ್ಯ ಸೋಲಿಸಲು ಜೆಡಿಎಸ್ -ಬಿಜೆಪಿ ರಹಸ್ಯ ಒಪ್ಪಂದ ಮಾಡಿಕೊಂಡಿದ್ದವು: ಕಾಂಗ್ರೆಸ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ರಹಸ್ಯವಾಗಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂದು ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಆರೋಪಿಸಿದ್ದಾರೆ.

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ರಹಸ್ಯವಾಗಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂದು ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ, ಮೂರು ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು ಸತ್ಯ. ಚಾಮುಂಡೇಶ್ವರಿ, ವರುಣಾ, ಬಾದಾಮಿಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ಆಗಿತ್ತು. ಇದು ನೂರಕ್ಕೆ ನೂರು ಸತ್ಯ. ಸಿದ್ದರಾಮಯ್ಯ ಹಾಗೂ ಅವರ ಪುತ್ರನನ್ನು ಸೋಲಿಸುವುದಕ್ಕೆ ಒಳ ಒಪ್ಪಂದ ಆಗಿತ್ತು. ಇದರಲ್ಲಿ ಚಾಮುಂಡೇಶ್ವರಿಯಲ್ಲಿ
ಅವರು ಯಶಸ್ವಿಯಾದರು. ಉಳಿದ ಎರಡು ಕಡೆ ಅದು ವರ್ಕ್ ಆಗಿಲ್ಲ ಎಂದು ಕಿಡಿಕಾರಿದರು.

ಮಲ್ಲೇಶ್ವರಂನಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬಿ.ಫಾರಂ ಕೊಡುತ್ತಿರುವವರು ಅಶ್ವಥ್ ನಾರಾಯಣ, ಮೂರು ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಯಾರಾಗಬೇಕೆಂದು ಅಶ್ವಥ್ ನಾರಾಯಣ ನಿರ್ಧಾರ ಮಾಡ್ತಿದ್ದಾರೆ. ಇದನ್ನು ಒಳ ಒಪ್ಪಂದ ಎನ್ನದೆ ಇನ್ನೆನಂತಾರೆ ಕುಮಾರಸ್ವಾಮಿಯವರೇ? ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರಿಗೆ ಪ್ರಶ್ನೆ ಹಾಕಿದರು.

ಬೆನಗಹಳ್ಳಿ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆ ರದ್ಧತಿಗೆ ಕೋರ್ಟ್ ಒಪ್ಪಿಲ್ಲ. ಈಗ ಕೇಸ್ ವಿಚಾರಣೆ ಆರಂಭವಾಗುತ್ತಿದೆ. ನೀವು ಸಿಎಂ ಸ್ಥಾನದಲ್ಲಿದ್ದರೆ ನಿಷ್ಪಕ್ಷಪಾತ ವಿಚಾರಣೆ ಹೇಗೆ ಸಾಧ್ಯ? ಹೀಗಾಗಿ ನೀವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ. ಇಲ್ಲವೇ ಸುಪ್ರೀಂ ಕೋರ್ಟ್ ಮೂಲಕ ವಿಚಾರಣೆ ತಡೆ ತಂದುಕೊಳ್ಳಿ ಎಂದು ಆಗ್ರಹಿಸಿದರು.

Related Stories

No stories found.

Advertisement

X
Kannada Prabha
www.kannadaprabha.com