ಕಾಂಗ್ರೆಸ್ ಕೊಳೆತು ಹೋಗುತ್ತಿರುವ ಪಕ್ಷ: ಎನ್ ರವಿ ಕುಮಾರ್ ಟೀಕೆ

ರಾಜ್ಯದಲ್ಲಿನ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ದರಿದ್ರ ಸರ್ಕಾರ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕರೆದಿರುವುದು ಅವರ ಮಾನಸಿಕ ಅವನತಿಯನ್ನು ತೋರಿಸುತ್ತದೆ ಎಂದು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಟೀಕಿಸಿದ್ದಾರೆ.
ಎನ್ ರವಿ ಕುಮಾರ್
ಎನ್ ರವಿ ಕುಮಾರ್

ಬೆಂಗಳೂರು: ರಾಜ್ಯದಲ್ಲಿನ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ದರಿದ್ರ ಸರ್ಕಾರ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕರೆದಿರುವುದು ಅವರ ಮಾನಸಿಕ ಅವನತಿಯನ್ನು ತೋರಿಸುತ್ತದೆ ಎಂದು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಕೆಟ್ಟ ಭಾಷೆಯನ್ನು ಮುಂದುವರೆಸಿದ್ದಾರೆ. ರಾಜ್ಯದಲ್ಲಿ ದರಿದ್ರ ಸರ್ಕಾರವಿದೆ ಎಂದು ಹೇಳಿದ್ದಾರೆ.

ಆದರೆ ಸಿದ್ದರಾಮಯ್ಯ ನಡೆಸಿದ ಐದು ವರ್ಷಗಳ ತುಘಲಕ್ ದರ್ಬಾರ್ ಸರ್ಕಾರಕ್ಕೆ ಈ ಪದ ಅನ್ವಯಿಸಬಹುದು. ರಾಜ್ಯದಲ್ಲಿ ಅಭಿವೃದ್ಧಿ ಪರ, ರೈತಪರ ಸರ್ಕಾರವಿದೆ. 

ಅಧಿಕಾರಕ್ಕೇರಿದ ಕೇವಲ ಆರು ತಿಂಗಳಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಎಲ್ಲ ವರ್ಗಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ.

ಸದ್ಯ, ಸಂಪುಟ ವಿಸ್ತರಣೆಯೂ ಆಗಿರುವುದರಿಂದ ರಾಜ್ಯದಲ್ಲಿ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯಲಿದೆ. ಬಿಜೆಪಿ ಸರ್ಕಾರ ಮೂರು ವರ್ಷಗಳಲ್ಲಿ ರಾಜ್ಯವನ್ನು ಸುವರ್ಣ ರಾಜ್ಯವನ್ನಾಗಿ ಮಾಡುವ ಸಂಕಲ್ಪ ಮಾಡಿದೆ. 

ಪ್ರತಿಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಇದಕ್ಕೆ ಸಹಕರಿಸಬೇಕು. ಅದು ಬಿಟ್ಟು ಹತಾಷರಾಗಿ ಬಾಯಿಗೆ ಬಂದದ್ದನ್ನು ಮಾತನಾಡುವುದನ್ನು ನಿಲ್ಲಿಸಬೇಕು. ಸಿದ್ದರಾಮಯ್ಯ ಅವರು ಈ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಹೇಳಿದರು.

ಜೆಡಿಎಸ್ ನೊಂದಿಗೆ ಸೇರಿ ಕಾಲಹರಣ ಮಾಡಿದ ಸಮ್ಮಿಶ್ರ ಸರ್ಕಾರಕ್ಕೆ ದರಿದ್ರ ಸರ್ಕಾರ ಟೀಕೆ ಅನ್ವರ್ಥನಾಮವಾಗಬಹುದು. ದರಿದ್ರ ಸರ್ಕಾರ ಎಂದು ಕರೆದಿರುವುದು ಸಿದ್ದರಾಮಯ್ಯ ಅವರ ಮಾನಸಿಕ ಅವನತಿಯನ್ನು ತೋರಿಸುತ್ತಿದ್ದು, ಅವರು ತಮ್ಮ ಆಕ್ಷೇಪಾರ್ಹ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದರು.

ರಾಜ್ಯದಲ್ಲಿ ಅಭಿವೃದ್ಧಿ, ರೈತಪರ ಸರ್ಕಾರವಿದ್ದು, ಅಧಿಕಾರಕ್ಕೇರಿದ ಕೇವಲ ಆರು ತಿಂಗಳಲ್ಲಿ ಯಡಿಯೂರಪ್ಪ ಎಲ್ಲ ವರ್ಗಗಳ ಹಿತ ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ಮೊದಲ ಮೂರು ತಿಂಗಳಲ್ಲಿ ರಾಜ್ಯವನ್ನು ಬಾಧಿಸಿದ ನೈಸರ್ಗಿಕ ವಿಕೋಪವನ್ನು ಯಡಿಯೂರಪ್ಪ ನೇತೃತ್ವದ ಸರ್ಕಾರ ಸಮರ್ಥವಾಗಿ ಎದುರಿಸಿದೆ ಎಂದು ಸಮರ್ಥಿಸಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com