ಫೆ.17ಕ್ಕೆ ವಿಧಾನಮಂಡಲ  ಅಧಿವೇಶನ ಆರಂಭ: ತಂತ್ರಗಾರಿಕೆ ರೂಪಿಸಲು ಇಂದು ಸಂಜೆ ಕಾಂಗ್ರೆಸ್ ಮಹತ್ವದ ಸಭೆ 

ನಾಳೆ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದ ಹಿನ್ನೆಲೆಯಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರಗಾರಿಕೆ ಹೆಣೆಯಲು ಭಾನುವಾರ ಸಂಜೆ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನಾಳೆ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದ ಹಿನ್ನೆಲೆಯಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರಗಾರಿಕೆ ಹೆಣೆಯಲು ಭಾನುವಾರ ಸಂಜೆ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ.


ನಗರದ ಖಾಸಗಿ ಹೊಟೇಲ್‌ನಲ್ಲಿ ಸಂಜೆ 5 ಕ್ಕೆ ವಿಪಕ್ಷ ಹಾಗೂ ಶಾಸಕಾಂಗ ಪಕ್ಷ‌ದ ನಾಯಕರಾಗಿರುವ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ.


ವಿಧಾನಮಂಡಲ ಅಧಿವೇಶನದಲ್ಲಿ ಯಾವ ರೀತಿಯಲ್ಲಿ ಚರ್ಚೆಗಳಲ್ಲಿ ಯಾರು ಭಾಗಿಯಾಗಬೇಕು ಹಾಗೂ ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com